Breaking News

ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಅಂಗೀಕಾರ: ಮತ್ತೊಂದು ವೀಡಿಯೋದಲ್ಲಿ ಮೋದಿ ಅಭಿನಂದನೆ

Spread the love

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ವಿಷಯಗಳ ಕುರಿತು ಒಂದು ವಾರದ ಅವಧಿಯಲ್ಲಿ ನಾಲ್ಕನೇ ಬಾರಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಹಂಚಿಕೊಂಡಿದ್ದಾರೆ.

4ನೇ ಇನ್‌ಸ್ಟಾ ವೀಡಿಯೋದಲ್ಲಿ, ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆಯು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದಕ್ಕೆ ಪ್ರಧಾನಿ ಮೋದಿ ಅಭಿನಂದನೆ ತಿಳಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆಗೆ ಶಿಕ್ಷೆಯನ್ನು ಹೆಚ್ಚಿಸಲು ಮತ್ತು ಅಂತಹ ಪ್ರಕರಣಗಳನ್ನು ಇತ್ಯರ್ಥಪಡಿಸಲು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ಹಲವಾರು ಕ್ರಮಗಳನ್ನು ಪ್ರಸ್ತಾಪಿಸುವ ಮಸೂದೆಯನ್ನು ಬುಧವಾರ ಲೋಕಸಭೆ ಅಂಗೀಕರಿಸಿತು. ಗುರುವಾರ ರಾಜ್ಯಸಭೆಯಲ್ಲಿ ಅನುಮೋದನೆ ಪಡೆಯಿತು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ