Breaking News

ಕೈಕೊಟ್ಟ ಲವ್ವರ್ – ಮನನೊಂದು ಯುವಕ ಆತ್ಮಹತ್ಯೆ

Spread the love

ಕಾರವಾರ: ಪ್ರೀತಿಸಿದ ಹುಡುಗಿ ಕೈಕೊಟ್ಟ ಹಿನ್ನೆಲೆಯಲ್ಲಿ ಮನಸ್ಸಿನ ನೋವು ತಾಳಲಾರದೇ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡ ಭಾಗದ ರಾಮನಗರದ ಬಳಿ ನಡೆದಿದೆ.

ವೃತ್ತಿಯಲ್ಲಿ ಚಾಲಕನಾಗಿದ್ದ ಹರೀಶ ಮೇಸ್ತಾ (24) ಆತ್ಮಹತ್ಯೆಗೆ ಶರಣಾದ ಯುವಕ.

ತಾನು ಗಾಢವಾಗಿ ಪ್ರೀತಿಸುತ್ತಿದ್ದ ಯುವತಿಯನ್ನೇ ಮದುವೆಯಾಗಬೇಕೆಂಬ ಕನಸು ಕಂಡಿದ್ದ ಹರೀಶನಿಗೆ, ಇತ್ತೀಚೆಗೆ ಆಕೆ ದೂರವಾಗಿದ್ದು ತೀವ್ರ ನೋವು ತಂದೊಡ್ಡಿತ್ತು. ಪ್ರೇಮ ವೈಫಲ್ಯದಿಂದ ತೀವ್ರ ಮನನೊಂದಿದ್ದ ಈತ, ಮನೆಯಲ್ಲೇ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ವಿಷಯ ತಿಳಿದ ಹೊನ್ನಾವರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾವಿನ ನಿಖರ ಕಾರಣ ಹಾಗೂ ಘಟನೆಯ ಹಿನ್ನೆಲೆಯ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ