Breaking News

ಬಕೆಟ್‌ನಲ್ಲಿ ಬಿದ್ದು 8 ತಿಂಗಳ ಕಂದಮ್ಮ ದುರ್ಮರಣ

Spread the love

ಹಾಸನ: ಬಕೆಟ್‌ನಲ್ಲಿ ಬಿದ್ದು 8 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಹಾಸನ ನಗರದ ವಲ್ಲಭಭಾಯಿ ರಸ್ತೆಯಲ್ಲಿ ನಡೆದಿದೆ.

ಪುಷ್ಪಾಲೋಚನ ಸಾವನ್ನಪ್ಪಿದ ಪುಟ್ಟ ಮಗು. ಪುಷ್ಪಾಲೋಚನ ಗಿರೀಶ್-ಚೈತ್ರಾ ಮೂರನೇ ಪುತ್ರಿಯಾಗಿದ್ದಳು. ಗಿರೀಶ್ ಚಿನ್ನ-ಬೆಳ್ಳಿ ಕೆಲಸ ಮಾಡುತ್ತಿದ್ದು, ದಂಪತಿಗೆ ಮೂವರು ಹೆಣ್ಣುಮಕ್ಕಳು. ಈ ಪೈಕಿ ಪುಷ್ಪಾಲೋಚನ ಮೂರನೆಯವಳು. ಚೈತ್ರಾ ಬಕೆಟ್‌ನಲ್ಲಿ ಬಟ್ಟೆ ನೆನೆಯಲು ಹಾಕಿ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ತೆವಳುತ್ತಾ ಬಂದ ಕಂದಮ್ಮ ಬಕೆಟ್‌ನಲ್ಲಿ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಅತ್ತೆ-ಮಾವನ ಮನಸ್ಥಿತಿ ಎಂದಿಗೂ ಬದಲಾಗಲ್ಲʼ; ವಿಡಿಯೋ ರೆಕಾರ್ಡ್‌ ಮಾಡಿ ನೇಣಿಗೆ ಶರಣಾದ ಶಿಕ್ಷಕಿ

Spread the loveನವದೆಹಲಿ: ಮದುವೆಯಾದ 8 ತಿಂಗಳ ಬಳಿಕ ಸರ್ಕಾರಿ ಶಿಕ್ಷಕಿಯೊಬ್ಬರು ವಿಡಿಯೋ ರೆಕಾರ್ಡ್‌ ಮಾಡಿ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ