ಬೆಂಗಳೂರು: ಮದುವೆಯಾದ ಮೂರೇ ತಿಂಗಳಿಗೆ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿ, ಮೃತದೇಹವನ್ನು ಬೆಡ್ಶೀಟ್ನಲ್ಲಿ ಸುತ್ತಿಟ್ಟು ಮನೆಗೆ ಬೀಗ ಹಾಕಿ ಪರಾರಿಯಾದ ಘಟನೆ ಬೆಂಗಳೂರಿನ ಕುಂಬಳಗೋಡು ಸಮೀಪದ ಗೇರುಪಾಳ್ಯದಲ್ಲಿ ಬೆಳಕಿಗೆ ಬಂದಿದೆ.
ಬಿಹಾರ ಮೂಲದ ರಿಯಾ ಕುಮಾರಿ ಮೃತ ಮಹಿಳೆ. ಆರೋಪಿ ಪತಿ ಧೀರಜ್ ಕುಮಾರ್ ತಲೆಮರೆಸಿಕೊಂಡಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ನಾಲ್ಕು ತಿಂಗಳ ಹಿಂದೆ ಈ ದಂಪತಿ ಬಿಹಾರದಿಂದ ಬೆಂಗಳೂರಿಗೆ ಬಂದು ಗೇರುಪಾಳ್ಯದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ರಿಯಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಧೀರಜ್ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ. ಆದರೆ, ಕಳೆದ ಕೆಲವು ದಿನಗಳಿಂದ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಸ್ನೇಹಿತರು ಹಲವು ಬಾರಿ ಸಮಾಧಾನ ಮಾಡಿದರೂ ಪರಿಸ್ಥಿತಿ ಸುಧಾರಿಸಿರಲಿಲ್ಲ.
ಜಗಳ ತೀವ್ರಗೊಂಡ ವೇಳೆ ಧೀರಜ್ ಪತ್ನಿಯನ್ನು ಕೊಲೆ ಮಾಡಿ, ಮೃತದೇಹವನ್ನು ಬೆಡ್ಶೀಟ್ನಲ್ಲಿ ಸುತ್ತಿ ಮನೆಯೊಳಗೆ ಬಿಟ್ಟು ಬಾಗಿಲು ಹಾಕಿಕೊಂಡು ಪರಾರಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
Laxmi News 24×7