Breaking News

ಧಾರಾಕಾರ ಮಳೆಗೆ ಕುಸಿದು ಬಿದ್ದ ರಾಷ್ಟ್ರೀಯ ಹೆದ್ದಾರಿ ತಡೆಗೋಡೆ – ಕಳಪೆ ಕಾಮಗಾರಿ ಆರೋಪ

Spread the love

ಚಿಕ್ಕೋಡಿ: ಧಾರಾಕಾರ ಮಳೆಯಿಂದ ರಾಷ್ಟ್ರೀಯ ಹೆದ್ದಾರಿಯ  ತಡೆಗೋಡೆ ಕುಸಿದು ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಗಾಂಧಿ ಆಸ್ಪತ್ರೆ ಬಳಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ನಡೆದಿದೆ.

ಸುಮಾರು 25 ಅಡಿ ಎತ್ತರದ ಹೊಸದಾಗಿ ನಿರ್ಮಿಸಲಾಗಿದ್ದ ಹೆದ್ದಾರಿಯ ತಡೆಗೋಡೆ ಏಕಾಏಕಿ ಕುಸಿದು ಬಿದ್ದಿದೆ. ಗೋಡೆ ಕುಸಿದ ಪರಿಣಾಮ ಮಣ್ಣು ಹೊರಕ್ಕೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ.

ಕಳೆದ ಒಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಗೋಡೆ ನೆನೆದು ಕುಸಿದಿದೆ ಎನ್ನಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸರ್ವಿಸ್ ರಸ್ತೆಗಳ ಮೂಲಕ ತಾತ್ಕಾಲಿಕ ಪರ್ಯಾಯ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಯ ಕಳಪೆ ಕಾಮಗಾರಿಯೇ ಈ ಘಟನೆಗೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ