Breaking News

ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ

Spread the love

ಉಡುಪಿ: ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.

ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಹತ್ಯೆಗೀಡಾದ ವ್ಯಕ್ತಿ. ಕುಂದಾಪುರದ ಚರ್ಚ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 3:30 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಈ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಐವನ್ ರಿಚರ್ಡ್ ಅವರು ಕೆಲವು ವ್ಯವಹಾರಗಳನ್ನು ನಡೆಸುತ್ತಿದ್ದರು. ತಮ್ಮ ಮೊದಲ ಪತ್ನಿಯನ್ನು ತೊರೆದು, ಬಾರ್ಕೂರು ಮೂಲದ ಮಹಿಳೆಯೊಂದಿಗೆ ಅವರು ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

ಮುಂಜಾನೆ ಮಹಿಳೆಯೊಂದಿಗೆ ಕಾರಿನಲ್ಲಿ ಕುಂದಾಪುರದ ಚರ್ಚ್ ರಸ್ತೆಗೆ ಬಂದಿದ್ದ ವೇಳೆ, ಹೋಲಿ ರೋಸರಿ ಚರ್ಚ್ ಎದುರು ಅಪರಿಚಿತ ವ್ಯಕ್ತಿಯೊಬ್ಬ ಪಿಸ್ತೂಲ್‌ನಿಂದ ಐವನ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಗುಂಡೇಟಿನಿಂದ ತೀವ್ರ ರಕ್ತಸ್ರಾವಗೊಂಡ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಜೊತೆಯಲ್ಲಿದ್ದ ಮಹಿಳೆ ಆರೋಪಿಯನ್ನು ಗುರುತಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಗೆ ಇನ್ನಷ್ಟೇ ಕಾರಣ ತಿಳಿದು ಬರಬೇಕಿದೆ. ಸ್ಥಳಕ್ಕೆ ಕುಂದಾಪುರ ಪೊಲೀಸರು ಹಾಗೂ ಸೊಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಈ ಸಂಬಂಧ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾಗಿರುವ ಆರೋಪಿಯ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.


Spread the love

About Laxminews 24x7

Check Also

ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆ. 1ರಂದು 16ನೇ ಪದವಿ ಪ್ರದಾನ ಸಮಾರಂಭ

Spread the loveಬಾಗಲಕೋಟೆ: ನಗರದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ 2024–25ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ೧೬ನೇ ಪದವಿ ಪ್ರದಾನ ಸಮಾರಂಭವನ್ನು ಆಗಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ