Breaking News

ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಭೇಟಿ

Spread the love

ಬಾಗಲಕೋಟೆ: ಹಿಂದೂಪರ ಕಾರ್ಯಕರ್ತ, ಗೋರಕ್ಷಕ ಹಾಗೂ ‘ರಾಷ್ಟ್ರಪಡೆ’ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಅವರು ಗುರುವಾರ ಸಂಜೆ ಬವಿವ ಸಂಘದ ಕಾರ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಅವರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ವಿಚಾರಿಸಿದರು.

ಈ ಸಂದರ್ಭದಲ್ಲಿ ಡಾ. ವೀರಣ್ಣ ಚರಂತಿಮಠ ಅವರು ಪುನೀತ್ ಕೆರೆಹಳ್ಳಿಯವರನ್ನು ಆತ್ಮೀಯವಾಗಿ ಸ್ವಾಗತಿಸಿ, ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು. ಬಳಿಕ ಇಬ್ಬರೂ ಪರಸ್ಪರ ಆರೋಗ್ಯ ವಿಚಾರಗಳೊಂದಿಗೆ ಸಮಕಾಲೀನ ಸಾಮಾಜಿಕ ಹಾಗೂ ಸಾರ್ವಜನಿಕ ವಿಷಯಗಳ ಕುರಿತು ಸ್ನೇಹಪೂರ್ವಕವಾಗಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ರಾಷ್ಟ್ರಪಡೆ ಸಂಘಟನೆಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ