Breaking News

ಇಂದು ಮೈಸೂರಿಗೆ ಮೋದಿ ಆಗಮನ – ವಿವೇಕ ಸ್ಮಾರಕ ಲೋಕಾರ್ಪಣೆ

Spread the love

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ (ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ ಭೇಟಿಯ ನೆನಪಿನಲ್ಲಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ಆಗಮಿಸುತ್ತಿದ್ದು, ಇಡೀ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಪ್ರವಾಸದ ವೇಳಾಪಟ್ಟಿ
ಮಧ್ಯಾಹ್ನ 2:55 – ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮನ
ಮಧ್ಯಾಹ್ನ 3:15 – ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ನಗರದ ಓವಲ್ ಮೈದಾನಕ್ಕೆ ಆಗಮನ
ಮಧ್ಯಾಹ್ನ 3:25 – ಓವಲ್ ಮೈದಾನದಿಂದ ರಸ್ತೆ ಮಾರ್ಗವಾಗಿ ವಿವೇಕ ಸ್ಮಾರಕಕ್ಕೆ ತೆರಳಲಿರುವ ಮೋದಿ, ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ 5 ನಿಮಿಷಗಳ ಕಾಲ ಧ್ಯಾನ ಮಾಡಲಿದ್ದಾರೆ.
ಮಧ್ಯಾಹ್ನ 3:30 – ಸಂಜೆ 5:15: ರಾಮಕೃಷ್ಣ ಆಶ್ರಮದ ಶಾಲಾ ಆವರಣದಲ್ಲಿ ನಡೆಯುವ ಪ್ರಮುಖ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿ
ಸಂಜೆ 5:55 – ಮೈಸೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ನವದೆಹಲಿಗೆ ನಿರ್ಗಮನ

ಈ ವಿಶೇಷ ಕಾರ್ಯಕ್ರಮದಲ್ಲಿ ಪ್ರಸಿದ್ಧ ಶಿಲ್ಪಿ ಅರುಣ್ ಯೋಗಿರಾಜ್(Arun Yogiraj) ಅವರು ಕೆತ್ತಿರುವ ಸ್ವಾಮಿ ವಿವೇಕಾನಂದರ ಅತ್ಯಾಕರ್ಷಕ ಏಕಶಿಲಾ ಮೂರ್ತಿಯನ್ನು ಪ್ರಧಾನಿ ಮೋದಿಯವರಿಗೆ ನೆನಪಿನ ಕಾಣಿಕೆಯಾಗಿ ನೀಡಲಾಗುತ್ತದೆ

ಮೈಸೂರು ಭೇಟಿಯ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ 1892ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿಗೆ ನೀಡಿದ್ದ ಐತಿಹಾಸಿಕ ಭೇಟಿಯ ನೆನಪಿನಲ್ಲಿ ಈ ಸ್ಮಾರಕ ನಿರ್ಮಾಣಗೊಂಡಿದೆ. ನಮ್ಮ ಯುವಜನತೆಯನ್ನು ಸಬಲೀಕರಣಗೊಳಿಸುವಲ್ಲಿ ಹಾಗೂ ಸ್ವಾಮಿ ವಿವೇಕಾನಂದರ ಉದಾತ್ತ ಚಿಂತನೆಗಳನ್ನು ಪ್ರಚಾರಪಡಿಸುವಲ್ಲಿ ಇದು ಸದಾ ಮುಂಚೂಣಿಯಲ್ಲಿರಲಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಧಾನಿಯವರ ಭೇಟಿಯ ಹಿನ್ನೆಲೆಯಲ್ಲಿ ಎಸ್‌ಪಿಜಿ (SPG) ಪಡೆ ಹಾಗೂ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಿದ್ದ ಹೊತ್ತಿನಲ್ಲೇ, ಶುಕ್ರವಾರ ಯುವಕನೊಬ್ಬ ಕೈಯಲ್ಲಿ ಲಾಂಗ್ (ಕತ್ತಿ) ಹಿಡಿದು ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸಿದ ಆತಂಕಕಾರಿ ಘಟನೆ ನಡೆದಿತ್ತು.

ಘಟನೆ ಬೆನ್ನಲ್ಲೇ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದು, ಪ್ರಧಾನಿ ಸಂಚರಿಸುವ ಮಾರ್ಗ ಹಾಗೂ ಕಾರ್ಯಕ್ರಮದ ಸ್ಥಳಗಳಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ