Breaking News

ರಾಯಚೂರು, ಕೊಪ್ಪಳ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಪ್ರವೇಶ ಪತ್ರ ಡೌನ್‌ಲೋಡ್‌ಗೆ ಸಲಹೆ: ಕೆಇಎ

Spread the love

ಬೆಂಗಳೂರು: ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ಕೇಂದ್ರಗಳನ್ನು ಪರೀಕ್ಷೆ ಬರೆಯಲು ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳು ಪುನಃ ತಮ್ಮ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮನವಿ ಮಾಡಿಕೊಂಡಿದೆ.

ಪರೀಕ್ಷಾ ಕೇಂದ್ರಗಳ ಗೊಂದಲ ನಿವಾರಿಸುವ ಸಲುವಾಗಿ ಮತ್ತೊಮ್ಮೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು, ಆಗಸ್ಟ್ 2ರಂದು ನಡೆಯುವ ಲಿಖಿತ ಪರೀಕ್ಷೆಗೆ ಹಾಜರಾಗಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಎರಡನೇ ಬಾರಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಈ ಜಿಲ್ಲೆಗಳ ಅಭ್ಯರ್ಥಿಗಳಿಗೆ ಈ ಹಿಂದೆಯೇ ಎಸ್ಎಂಎಸ್ ಸಂದೇಶ ಕೂಡ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ