Breaking News

ದಿಗಂಬರ ಪಾಟೀಲ್ ವಿರುದ್ಧ ಕರವೇ ಆಕ್ರೋಶ: ಖಾನಾಪುರದಲ್ಲಿ ಹೆದ್ದಾರಿ ತಡೆದು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ!

Spread the love

ದಿಗಂಬರ ಪಾಟೀಲ್ ವಿರುದ್ಧ ಕರವೇ ಆಕ್ರೋಶ: ಖಾನಾಪುರದಲ್ಲಿ ಹೆದ್ದಾರಿ ತಡೆದು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ!
ಸ್ವತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಹಾರಾಷ್ಟ್ರಕ್ಕೆ ಜೈಕಾರ ಕೂಗಿದ ದಿಗಂಬರ ಪಾಟೀಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಖಾನಾಪುರದಲ್ಲಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಖಾನಾಪುರ-ಯಲ್ಲಾಪುರ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿದ ಪ್ರತಿಭಟನಾಕಾರರು, ಘಟನೆಗೆ ತಹಶೀಲ್ದಾರ್ ವಿರುದ್ಧ ಆಕ್ರೋಶ ಹೊರಹಾಕಿ ಕಚೇರಿಗೆ ಮುತ್ತಿಗೆ ಹಾಕಿದರು.
ಖಾನಾಪುರ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕಾ ಘಟಕದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಮಹಾರಾಷ್ಟ್ರಕ್ಕೆ ಜೈಕಾರ ಕೂಗಿದ ದಿಗಂಬರ ಪಾಟೀಲ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಈ ಘಟನೆ ಸಂಭವಿಸಿದಾಗ ಸಭೆಯಲ್ಲಿದ್ದು ಯಾವುದೇ ಕ್ರಮ ಜರುಗಿಸದ ತಹಶೀಲ್ದಾರ್ ಧೋರಣೆಯನ್ನು ಖಂಡಿಸಿ, ಕರವೇ ಪದಾಧಿಕಾರಿಗಳು ಖಾನಾಪುರ-ಯಲ್ಲಾಪುರ ರಾಜ್ಯ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಸಂಚಾರ ತಡೆದರು. ಬಳಿಕ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರತಿಭಟನೆಯಲ್ಲಿ ಕರವೇ ತಾಲೂಕಾ ಅಧ್ಯಕ್ಷ ವಿಠ್ಠಲ ಹಿಂಡಲಕರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಶರಥ ಬನೋಶಿ, ಆರೋಗ್ಯಪ್ಪ ಪಾದನಕಟ್ಟಿ, ಭರತೇಶ ಜೋಳದ, ಜಯವಂತ ನಿಡಗಲಕರ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗಿಯಾದ್ದರು.

Spread the love

About Laxminews 24x7

Check Also

ಗೋವಾ ಚುನಾವಣೆಗೆ ಕಾಂಗ್ರೆಸ್‌ನಿಂದ ಬಿಗ್ ಪ್ಲಾನ್: ಮೈತ್ರಿ ಸಮಿತಿಗೆ ಡಾ. ಅಂಜಲಿ ನಿಂಬಾಳ್ಕರ್ ನೇಮಕ!

Spread the love ಗೋವಾ ಚುನಾವಣೆಗೆ ಕಾಂಗ್ರೆಸ್‌ನಿಂದ ಬಿಗ್ ಪ್ಲಾನ್: ಮೈತ್ರಿ ಸಮಿತಿಗೆ ಡಾ. ಅಂಜಲಿ ನಿಂಬಾಳ್ಕರ್ ನೇಮಕ! ಗೋವಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ