Breaking News

ಕಿತ್ತೂರಿನಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ, ಮಕ್ಕಳಿಗೆ ಬೆಂಗಾವಲಾಗಿ ನಿಂತ ಪೋಷಕರು!

Spread the love

ಕಿತ್ತೂರಿನಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ, ಮಕ್ಕಳಿಗೆ ಬೆಂಗಾವಲಾಗಿ ನಿಂತ ಪೋಷಕರು!
ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ಬೀದಿ ನಾಯಿಗಳ ಕಾಟ ಮಿತಿಮೀರಿದ್ದು, ಶಾಲಾ ಮಕ್ಕಳಿಗೆ ತಾವೇ ಬೆಂಗಾವಲಾಗಿ ನಿಂತು ಶಾಲೆಗೆ ಕರೆದೊಯ್ಯುವ ಪರಿಸ್ಥಿತಿ ಪೋಷಕರಿಗೆ ಎದುರಾಗಿದೆ.
ಪಟ್ಟಣ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಿತ್ತೂರು ಪಟ್ಟಣದಲ್ಲಿ ಕಳೆದ ಕೆಲವು ದಿನಗಳಿಂದ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ಭಯದಲ್ಲೇ ಓಡಾಡುವಂತಾಗಿದೆ. ಅಧಿಕಾರಿಗಳು ಕ್ರಮ ಕೈಗೊಳ್ಳದ ಕಾರಣ ಆತಂಕಗೊಂಡ ಪೋಷಕರು ತಮ್ಮ ಮಕ್ಕಳ ಸುರಕ್ಷತೆಗಾಗಿ ತಾವೇ ಬೆಂಗಾವಲಾಗಿ ನಿಂತು ಕೈಹಿಡಿದು ಶಾಲೆಗೆ ತಲುಪಿಸುತ್ತಿದ್ದಾರೆ.
ಬೀದಿ ನಾಯಿಗಳಿಂದ ಏನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿರುವ ಗ್ರಾಮಸ್ಥರು, ತಕ್ಷಣವೇ ಪಟ್ಟಣ ಪಂಚಾಯತಿ ಅಧಿಕಾರಿಗಳು ಎಚ್ಚೆತ್ತುಕೊಂಡು ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದಾರೆ.

Spread the love

About Laxminews 24x7

Check Also

ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ – ಕ್ಷಮೆಯಾಚಿಸಿದ ಶಾಸಕ ಸುರೇಶ್‌ಗೌಡ ಪುತ್ರಿ

Spread the loveಮಂಡ್ಯ: ಲೇಡಿ ಪಿಎಸ್‌ಐಗೆ  ಕಪಾಳಮೋಕ್ಷ ಪ್ರಕರಣ ಸಂಬಂಧ ಶಾಸಕ ಸುರೇಶ್‌ಗೌಡ  ಪುತ್ರಿ ಐಶ್ವರ್ಯ ಪಿಎಸ್‌ಐ ಸವಿತಾ ಪಾಟೀಲ್‌ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ