Breaking News

ಹೈವೇ ದರೋಡೆ ನಡೆಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Spread the love

ಚಿತ್ರದುರ್ಗ: ಹೈವೇ ದರೋಡೆ ನಡೆಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಹಿರಿಯೂರು ತಾಲ್ಲೂಕಿನ ಹುಲುಗಲಕುಂಟೆ ನಿವಾಸಿಗಳಾದ ಆರ್. ಸುನೀಲ್ ಹಾಗೂ ಎನ್. ಸುನೀಲ್ ಎಂದು ಗುರುತಿಸಲಾಗಿದೆ.
ಆರೋಪಿಗಳು ಪರಮೇನಹಳ್ಳಿ ಸಮೀಪದ ಹೆದ್ದಾರಿಯಲ್ಲಿ ಕಾರು ಹಾಗೂ ಲಾರಿ ಚಾಲಕರ ಮೇಲೆ ಹಲ್ಲೆ ನಡೆಸಿ, ಅವರಿಂದ ಹಣ ದೋಚುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಪೊಲೀಸರು ಬಂಧಿತರಿಂದ ಸುಲಿಗೆ ಮಾಡಿದ್ದ ₹4,000 ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್‌ನ್ನು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Spread the love

About Laxminews 24x7

Check Also

ಕಿತ್ತೂರಿನಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ, ಮಕ್ಕಳಿಗೆ ಬೆಂಗಾವಲಾಗಿ ನಿಂತ ಪೋಷಕರು!

Spread the love ಕಿತ್ತೂರಿನಲ್ಲಿ ಹೆಚ್ಚಿದ ಬೀದಿ ನಾಯಿಗಳ ಹಾವಳಿ, ಮಕ್ಕಳಿಗೆ ಬೆಂಗಾವಲಾಗಿ ನಿಂತ ಪೋಷಕರು! ಬೆಳಗಾವಿ ಜಿಲ್ಲೆಯ ಕಿತ್ತೂರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ