ಇದೇ ಸಂದರ್ಭದಲ್ಲಿ ನೂತನ ಶಾಖೆಯ ಅಧ್ಯಕ್ಷ ಗಂಗಪ್ಪ ಕುಂಬಳಿ ಸೇರಿದಂತೆ ಎಲ್ಲಾ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷರಾದ ಬಾಬು ಪೂಜಾರಿ, ಸಾಗರ್ ಕೋಲಕಾರ್, ಜಿಲ್ಲಾ ಅಧ್ಯಕ್ಷ ಬೈರು ಮೇತ್ರಿ, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಕೋಟಗಾರ್, ಉಪಾಧ್ಯಕ್ಷ ಮಾರ್ಥಾಂಡ ಕೋಟಗಾರ್, ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಮತ್ತಿವಾಡೆ, ಪ್ರಧಾನ ಕಾರ್ಯದರ್ಶಿ ದೀಪಾ ಕೋಲಕಾರ್, ಮಹಿಳಾ ಗ್ರಾಮೀಣ ಘಟಕದ ಅಧ್ಯಕ್ಷೆ ಪುಷ್ಪ ಕಾಂಬಳೆ ಹಾಗೂ ತಾಲೂಕು ಪ್ರಧಾನ ಕಾರ್ಯದರ್ಶಿ ರಮೇಶ ಕೋಲಕಾರ್ ಸೇರಿದಂತೆ ಹಲವು ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಚಿಕ್ಕಬಾಗೇವಾಡಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಶಕ್ತಿ ಸಂಘದ ನೂತನ ಶಾಖೆ ಉದ್ಘಾಟನೆ
ಚಿಕ್ಕಬಾಗೇವಾಡಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಶಕ್ತಿ ಸಂಘದ ನೂತನ ಶಾಖೆ ಉದ್ಘಾಟನೆ
‘ಜೈ ಭೀಮ್, ಜೈ ಸಂವಿಧಾನ, ಜೈ ಭಾರತ’ ಘೋಷಣೆಯೊಂದಿಗೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಶಕ್ತಿ ಸಂಘದ ನೂತನ ಶಾಖೆಯನ್ನು ಅದ್ಧೂರಿಯಾಗಿ ಉದ್ಘಾಟಿಸಲಾಯಿತು. ಸಮಾಜದಲ್ಲಿ ಶಿಕ್ಷಣ, ಸಂಘಟನೆ ಹಾಗೂ ಸಂವಿಧಾನದ ಆಶಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಸಂಕಲ್ಪದೊಂದಿಗೆ ಈ ನೂತನ ಶಾಖೆ ತನ್ನ ಕಾರ್ಯಾರಂಭ ಮಾಡಿದೆ.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ ಲಕ್ಷ್ಮಣ ಕೋಲಕಾರ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿಚಾರಧಾರೆಗಳೊಂದಿಗೆ ದಲಿತರ ಪರವಾಗಿ ಧ್ವನಿ ಎತ್ತಿದ ಎಲ್ಲಾ ಮಹನೀಯರನ್ನು ಸ್ಮರಿಸಬೇಕು ಎಂದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಅನ್ಯಾಯವಾದರೂ ತಮ್ಮ ಸಂಘಟನೆ ನಿರಂತರವಾಗಿ ಹೋರಾಟ ನಡೆಸಲಿದೆ ಎಂದು ಭರವಸೆ ನೀಡಿದರು. ಇದೇ ವೇಳೆ ವಾಲ್ಮೀಕಿ ಯುವ ಘಟಕದ ಅಧ್ಯಕ್ಷ ಮಹೇಶ ಶೀಗಿಹಳ್ಳಿ ಮಾತನಾಡಿ, ಬೆಳೆಯುವ ಯುವ ಮುಖಂಡರಿಗೆ ಬೆದರಿಕೆ ಹಾಕಿದರೆ ಕಾನೂನಿನ ಮೂಲಕ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಸಿದರು. ವಿದ್ಯಾರ್ಥಿ ಮುಖಂಡ ಆಕಾಶ ಬೇವಿನಕಟ್ಟಿ ಮಾತನಾಡಿ, ಮಕ್ಕಳು ಮೊಬೈಲ್ ಬಳಕೆಯಿಂದ ದೂರವಿದ್ದು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕೆಂದು ಕಿವಿಮಾತು ಹೇಳಿದರು.
Laxmi News 24×7