Breaking News

ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸಿ, 10ಕ್ಕೂ ಹೆಚ್ಚು ಮೊಬೈಲ್‌ ಜಪ್ತಿ

Spread the love

ಬೆಂಗಳೂರು: ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದ ಆರೋಪದ ಮೇರೆಗೆ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ 80ಕ್ಕೂ ಹೆಚ್ಚು ಮಂದಿ ಅಧಿಕಾರಿ-ಸಿಬ್ಬಂದಿ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸಿ, 10ಕ್ಕೂ ಹೆಚ್ಚು ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ.

ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಿಸಿಬಿ ಡಿಸಿಪಿ ಹರಿಬಾಬು ಮತ್ತು ರಾಜಾ ಇಮಾಮ್‌ ಖಾಸೀಂ ನೇತೃತ್ವದ ಸುಮಾರು 90ಕ್ಕೂ ಹೆಚ್ಚು ಮಂದಿ ಜೈಲಿನ ಪ್ರತಿಯೊಂದು ಬ್ಯಾರಕ್‌ಗಳಲ್ಲಿ ರಾತ್ರಿ 8 ಗಂಟೆವರೆಗೂ ತಪಾಸಣೆ ನಡೆಸಿದ್ದಾರೆ.

ಈ ವೇಳೆ ಕೆಲ ಬ್ಯಾರಕ್‌ಗಳಲ್ಲಿ 10ಕ್ಕೂ ಹೆಚ್ಚು ಮೊಬೈಲ್‌ಗಳು ಜಪ್ತಿ ಮಾಡಲಾಗಿದೆ. ಇನ್ನು ಕೆಲವರು ನಿಷೇಧಿತ ವಸ್ತುಗಳನ್ನು ಇಟ್ಟುಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಸಿಸಿಬಿ ಮೂಲಗಳು ತಿ‍ಳಿಸಿವೆ.

ಪ್ರತಿ ಠಾಣಾ ವ್ಯಾಪ್ತಿಯಲ್ಲಿ ರೌಡಿ ನಿಗ್ರಹ ಪಡೆ ರಚನೆಯಾದ ಬೆನ್ನಲ್ಲೇ ಹೊರಗಡೆ ಇರುವ ರೌಡಿಗಳ ಜತೆ ಜೈಲಿನಲ್ಲಿರುವ ರೌಡಿಗಳು ಸಂಪರ್ಕದಲ್ಲಿರುವುದು ಬೆಳ‍ಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಜೈಲಿನ ಮೇಲೆ ದಾಳಿ ನಡೆಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.ಜೈಲಿನಲ್ಲಿ ನಿಷೇಧಿತ ವಸ್ತುಗಳ ಸಾಗಣೆ ವಿರುದ್ಧ ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳ ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದರೂ ಪ್ರತಿರೋಧ ಎಂಬಂತೆ ವಾಮಮಾರ್ಗದಲ್ಲಿ ಕಾರಾಗೃಹದಲ್ಲಿ ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳ ಪತ್ತೆಯಾಗುತ್ತಿವೆ. ಇದನ್ನು ಹತ್ತಿಕ್ಕುವ ಸಲುವಾಗಿ ಸಮರ ಸಾರಿರುವ ಜೈಲು ಸಿಬ್ಭಂದಿಗಳಿಗೆ ವಿಚಾರಣಾ ಕೈದಿಗಳಿಂದ ಜೀವ ಬೆದರಿಕೆ ಬರುತ್ತಿವೆ ಎನ್ನುವ ಬಗ್ಗೆ ವರದಿಯಾಗಿತ್ತು.


Spread the love

About Laxminews 24x7

Check Also

ಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡ

Spread the loveವಿಜಂಯಪುರ: 188 ತಾಲೂಕುಗಳು ಘೋಷಣೆ ಆದಾಗಲೂ, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ಘೋಷಣೆ ಆದರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ