ಗೋಕಾಕ: ಚಿಕ್ಕನಂದಿ ಗ್ರಾಮದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಗೆ ಶ್ರೀ ಸಂತ ಬಾಳು ಮಾಮಾ ದೇವರು ಆಗಮಿಸಿದ ಹಿನ್ನೆಲೆಯಲ್ಲಿ ಶ್ರೀಮತಿ ಅಂಬಿಕಾ ಸಂತೋಷ ಜಾರಕಿಹೊಳಿ ಅವರು ವಿಶೇಷ ಪೂಜೆ ಸಲ್ಲಿಸಿದರು
ಈ ಸಂದರ್ಭದಲ್ಲಿ ಶ್ರೀ ಸಂತ ಬಾಳು ಮಾಮಾ ದೇವರೊಂದಿಗೆ ಆಗಮಿಸಿದ್ದ 2,000ಕ್ಕೂ ಅಧಿಕ ಕುರಿಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಅವುಗಳಿಗೆ ಅಗತ್ಯವಾದ ಸ್ಥಳಾವಕಾಶದ ವ್ಯವಸ್ಥೆ ಮಾಡಲಾಯಿತು.
ಭಕ್ತರು ಹಾಗೂ ಕುರಿಗಳಿಗಾಗಿ ಪ್ರಸಾದ ವ್ಯವಸ್ಥೆಯನ್ನೂ ಮಾಡಲಾಗಿದ್ದು, ಕಾರ್ಯಕ್ರಮವು ಭಕ್ತಿಭಾವದಿಂದ ನೆರವೇರಿತು.
Laxmi News 24×7