Breaking News

ಯುವಕರು ರಕ್ತದಾನಕ್ಕೆ ಮುಂದಾಗಬೇಕು

Spread the love

ಬೆಳಗಾವಿ: ಪದ್ಮಶ್ರೀ ಡಾ.ಪ್ರಭಾಕರ ಕೋರೆ ಅವರ ೭೯ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಂಡ ರಕ್ತದಾನ ಶಿಬಿರವು ವಿದ್ಯಾರ್ಥಿಗಳಲ್ಲಿ ಸಮಾಜಮುಖಿ ಸೇವೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ಉದ್ದೇಶವನ್ನು ಹೊಂದಿದೆ, ಯುವಕರು ರಕ್ತದಾನಕ್ಕೆ ಮುಂದಾಗಬೇಕು ಎಂದು ಕೆಎಲ್‌ಇ ಕೃಷಿ ವಿಜ್ಞಾನ ಮಹಾವಿದ್ಯಾಲಯದ ಡೀನ್ ಡಾ.ಬಿ.ಡಿ.ಬಿರಾದಾರ ಕರೆ ಮಾಡಲು.
ಸವದತ್ತಿ ತಾಲೂಕಿನ ಕಾರಿಮನಿ ಗ್ರಾಮದಲ್ಲಿ ಕೆಎಲ್‌ಇ ಕೃಷಿ ವಿಜ್ಞಾನ ಮಹಾವಿದ್ಯಾಲಯದ ವತಿಯಿಂದ ಹಮ್ಮಿಕೊಂಡಿರುವ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದಲ್ಲಿ ಕೆಎಲ್‌ಇ ಡಾ.ಪ್ರಭಾಕರ ಕೋರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಿಂದ ಬುಧವಾರ ನಡೆದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.
ಒಬ್ಬ ವ್ಯಕ್ತಿ ನೀಡುವ ರಕ್ತ ಹಲವಾರು ಜನರ ಜೀವ ಉಳಿಸಲು ಸಹಕಾರಿಯಾಗುತ್ತದೆ. ಜತಗೆ ರಕ್ತದಾನ ಮಾಡುವುದರಿಂದ ಉಪಯೋಗವಿದೆ ಎಂದು ರಕ್ತದಾನದ ಮಹತ್ವವನ್ನು ವಿವರಿಸಿದರು.
ಅಧ್ಯಕ್ಷತೆ ವಹಿಸಿದ್ದ ಕೆಎಲ್‌ಇ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಿಠ್ಠಲ ಮಾನೆ ಮಾತನಾಡಿ ರಕ್ತದಾನ ಕುರಿತು ಸಮಾಜದಲ್ಲಿರುವ ಅನಗತ್ಯ ಭಯ ಮತ್ತು ತಪ್ಪು ಕಲ್ಪನೆಗಳನ್ನು ದೂರಮಾಡಿ, ಅರ್ಹ ವ್ಯಕ್ತಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ಮಾಡಿ ಮಾಡಲಾಗಿದೆ.
ಎಸ್.ವಿ ವಿರಾಗಿ, ಡಾ.ಪ್ರವೀಣಕುಮಾರ ಎಂ.ಬಿ, ಡಾ.ಮಧುರಿಮ ವಿನೋದ, ಡಾ.ಬಾಳೇಶ ಗೌಡಪ್ಪನವರ ಇತತರಿದ್ದರು.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ