Breaking News

ಡಿಸಿಎಂ ಹುದ್ದೆ ಹೈಕಮಾಂಡ್ ಅಂತಿಮ ನಿರ್ಧಾರ

Spread the love

ಬೆಳಗಾವಿ: ಮುಂಬರುವ ಚುನಾವಣೆ, ಪಕ್ಷ ಸಂಘಟನೆ ಹಿತದೃಷ್ಟಿಯಿಂದ ನನಗೆ ಹಾಗೂ ಸಚಿವ ಎಂ.ಬಿ. ಪಾಟೀಲಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಕುರಿತು ವರಿಷ್ಠರು ಚರ್ಚೆ ನಡೆಸಿರುವುದು ನಿಜ. ಹೀಗಾಗಿ ಹೈಕಮಾಂಡ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಬೇಡಿಕೆ ಇಟ್ಟಿಲ್ಲ.ಪಕ್ಷವೇ ನಮ್ಮನ್ನು ಗುರುತಿಸಿ ಜವಾಬ್ದಾರಿ ನೀಡಬೇಕು. ಅಲ್ಲಿಯೇವರೆಗೆ ಯಾವುದೇ ರೀತಿಯ ಒತ್ತಡ ಹೇರುವುದಿಲ್ಲ. ಸಮಯ ಬಂದಾಗ ಎಲ್ಲ ವಿಷಯಗಳಿಗೆ ಸ್ಪಷ್ಟವಾದ ಉತ್ತರ ಸಿಗಲಿದೆ
 ನೂತನ 19 ಸಚಿವರಿಗೆ ಆ.13ರೊಳಗಾಗಿ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಖಾತೆ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ತಾವು ಕೂಡ ಯಾವುದೇ ಖಾತೆಯನ್ನು ಕೇಳಿಲ್ಲ. ಯಾರಿಗೆ ಯಾವ ಖಾತೆ ನೀಡಬೇಕು ಎಂಬುದು ಪಕ್ಷದ ತೀರ್ಮಾನಕ್ಕೆ ಬಿಟ್ಟ ವಿಚಾರ. ಪಕ್ಷದ ನಾಯಕತ್ವ ಕೈಗೊಳ್ಳುವ ನಿರ್ಧಾರವನ್ನು ನಾವು ಗೌರವಿಸುತ್ತೇವೆ.ಲೋಕೋಪಯೋಗಿ ಇಲಾಖೆಯಲ್ಲಿಯೇ ಮುಂದುವರಿಯುವುದಾಗಿ ಸ್ಪಷ್ಟಪಡಿಸಲಾಗಿದೆ.
 ರಾಜ್ಯದಲ್ಲಿ ಎಲ್ಲೆಲ್ಲಿ ಸೇತುವೆಗಳ ಅವಶ್ಯಕತೆ ಇದೆಯೋ ಅಲ್ಲಲ್ಲಿ ನಿರ್ಮಾಣ ಕಾಮಗಾರಿ ಕಾರ್ಯ ಕೈಗೊಳ್ಳಲಾಗಿದೆ. ಕಾಮಗಾರಿಗಳಿಗೆ ಈಗಾಗಲೇ ಟೆಂಡರ್ ಕೂಡ ನೀಡಲಾಗಿದೆ. ಶೀಘ್ರವೇ ಕಾಮಗಾರಿಗಳು ಆರಂಭವಾಗಲಿವೆ. ಬರ ಪರಿಸ್ಥಿತಿ ಕುರಿತು ಸರ್ಕಾರ ಗಂಭೀರವಾಗಿ ಪರಿಶೀಲನೆ ನಡೆಸುತ್ತಿದೆ.ಬರ ಪರಿಸ್ಥಿತಿಯ ಪರಿಶೀಲನೆಗಾಗಿ ರಾಜ್ಯದಾದ್ಯಂತ ಪ್ರವಾಸ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಯರಗಟ್ಟಿ, ಸವದತ್ತಿ ಹಾಗೂ ರಾಮದುರ್ಗ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಗುರುತಿಸಲಾಗಿದೆ ಎಂದು ತಿಳಿಸಿದರು.
ಸಿದ್ದರಾಮಯ್ಯ ನಮ್ಮ ನಾಯಕರು
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ. ಇಬ್ಬರು ನಾಯಕರು ಒಗ್ಗಟ್ಟಿನಿಂದ ಇದ್ದೇವೆ.ಮೊದಲು ಸಿದ್ದರಾಮಯ್ಯನವರ ಜೊತೆಗೆ ಹಿಂದೆ ಏನು ನಮ್ಮ ಸಂಬಂಧವಿತ್ತೋ, ಅದು ಈಗಲೂ ಹಾಗೇ ಮುಂದುವರಿದಿದೆ. ನಮ್ಮ ನಡುವೆ ಅಸಮಾಧಾನವಿದೆ ಎನ್ನುವುದು ಕಪೋಕಲ್ಪಿತ ಸುದ್ದಿ. ಸಿದ್ದರಾಮಯ್ಯನವರು ಅಧಿಕಾರದಲ್ಲಿ ಇರಲಿ, ಬಿಡಲಿ, ನಮ್ಮ ನಾಯಕರು. ಅವರ ಜೊತೆಗೆ ಮೊದಲಿನಿಂದಲೂ ಉತ್ತಮ ಬಾಂಧವ್ಯವಿದೆ. ಹಿರಿಯ ನಾಯಕರು,  2028ರಲ್ಲಿ ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.
ನಾಗೇಂದ್ರ ಸಚಿವ ಸ್ಥಾನದಿಂದ ಕೈಬಿಡಲ್ಲ
 ಲೋಕಾಯುಕ್ತ ಹಾಗೂ ಎಸ್ ಐಟಿ  ಅವರು ಕ್ಲೀನ್ ಚಿಟ್ ನೀಡದ ಬಳಿಕವೇ ಪಕ್ಷದ ಹೈಕಮಾಂಡ್ ಅಳೆದು-ತೂಗಿ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿದೆ. ಹೀಗಾಗಿ ಅವರನ್ನು ಮತ್ತೆ ಸಚಿವ ಸ್ಥಾನದಿಂದ ತೆಗೆಯುವ ಪ್ರಶ್ನೆಯೇ ಉದ್ಭವಿಸುವುದಿಲ್ಲ.  ಮಹಿಳೆಯರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಮೀಸಲಿದ್ದು, ಬಾಕಿ ಉಳಿದ 1 ಸಚಿವ ಸ್ಥಾನವನ್ನು ಮಹಿಳೆಯರಿಗೆ ನೀಡಲಾಗುತ್ತದೆ ಎಂದು ಹೈಕಮಾಂಡ್ ಹೇಳಿದ್ದಾರೆ. ಆದರೆ ಆ ಸ್ಥಾನ ಯಾರಿಗೆ  ಕೋಡುತ್ತಾರೆ ಎಂದು ಕಾದು ನೋಡಬೇಕು ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ