Breaking News

ಕೊರೋನಾ ಸೋಂಕಿನಿಂದ ಹೊರಬಂದ 109 ಪೊಲೀಸ್ ಸಿಬ್ಬಂದಿ ಕರ್ತವ್ಯಕ್ಕೆ ಹಾಜರು

Spread the love

ಬೆಂಗಳೂರು,ಜು.23- ಕೊರೊನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಬೆಂಗಳೂರು ನಗರದ 109 ಪೊಲೀಸ್ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ತಿಳಿಸಿದ್ದಾರೆ.

ಕೊರೊನಾ ವಾರಿಯರ್ಸ್‍ಗಳಾಗಿ ವಿವಿಧ ಸ್ಥಳಗಳಲ್ಲಿ ಇವರು ಕರ್ತವ್ಯ ನಿರ್ವಹಿಸುತ್ತಿದ್ದಾಗ ಸೋಂಕು ತಗುಲಿತ್ತು. ತಕ್ಷಣ ಇವರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು.

ಇದೀಗ ಗುಣಮುಖರಾದ 109 ಪೊಲೀಸ್ ಸಿಬ್ಬಂದಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಅವರು ಈ ಸಂಜೆಗೆ ತಿಳಿಸಿದ್ದಾರೆ.

 


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ