Breaking News

ಕರ್ನಾಟಕ ಬಂದ್‌ಗೆ ರಾಜ್ಯ ರೈತ ಸಂಘಟನೆ ಬೆಂಬಲ – ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯ

Spread the love

ರಾಮನಗರ: ಕಾವೇರಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡಿನ ಧೋರಣೆಯನ್ನು ಖಂಡಿಸಿ ಗುರುವಾರ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಜಿಲ್ಲೆಯ ರೈತ ಸಂಘಟನೆಗಳು ಸಂಪೂರ್ಣ ಬೆಂಬಲ ಸೂಚಿಸಿವೆ.

ಕಾವೇರಿ ಜಲಾನಯನ ಪ್ರದೇಶದ ಸಂಕಷ್ಟದ ನಡುವೆಯೂ ತಮಿಳುನಾಡು ಪದೇ ಪದೇ ಕಿರಿಕಿರಿ ಉಂಟುಮಾಡುತ್ತಿರುವುದಕ್ಕೆ ಕೃಷಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಬಾರದು ಎಂದು ಆಗ್ರಹಿಸಿರುವ ರೈತ ನಾಯಕರು, ಈ ವಿಚಾರದಲ್ಲಿ ರಾಜ್ಯ ಸರ್ಕಾರ ತಮಿಳುನಾಡಿಗೆ ತಕ್ಕ ಉತ್ತರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಬಡಗಲಪುರ ನಾಗೇಂದ್ರ ಬಣದ ಕರ್ನಾಟಕ ರಾಜ್ಯ ರೈತ ಸಂಘವು ಬಂದ್‌ಗೆ ಅಧಿಕೃತವಾಗಿ ಬೆಂಬಲ ಘೋಷಿಸಿದ್ದು, ನಾಳೆ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಬಂದ್ ಯಶಸ್ವಿಗೊಳಿಸುವುದಾಗಿ ತಿಳಿಸಿದೆ. ಕಾವೇರಿ ಹಿತರಕ್ಷಣೆಗೆ ಕನ್ನಡಿಗರೆಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕಾದ ಅಗತ್ಯವಿದೆ ಎಂದು ರೈತ ಮುಖಂಡರು ಕರೆ ನೀಡಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ