Breaking News

ರನ್ಯಾ ರಾವ್ ಪ್ರಕರಣ – ಸಿಸಿಟಿವಿ ದೃಶ್ಯ ನೀಡಲು ಹೈಕೋರ್ಟ್ ಸೂಚನೆ

Spread the love

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಿಸಿಟಿವಿ ದೃಶ್ಯಾವಳಿ  ನೀಡುವಂತೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್  ಇತ್ಯರ್ಥಪಡಿಸಿದೆ.

ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಿತು. ರನ್ಯಾ ಪರ ವಕೀಲ ವೈ.ಎಲ್.ಮಹೇಶ್ ವಾದ ಮಂಡಿಸಿ, 2025ರ ಜುಲೈ 15ರಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಸಿಐಎಸ್‌ಎಫ್ ಕಮಾಂಡೆಂಟ್ ಸರಿಯಾಗಿ ಪಾಲಿಸಿಲ್ಲ. ಹೀಗಾಗಿ, 2025ರ ಮಾರ್ಚ್ 3ರ ಸ್ಪಷ್ಟ ಸಿಸಿಟಿವಿ ದೃಶ್ಯಾವಳಿ ನೀಡಲು ನಿರ್ದೇಶಿಸಬೇಕು ಎಂದು ಮನವಿ ಮಾಡಿದರು.

ಸಿಐಎಸ್‌ಎಫ್ ಪರ ಎಎಸ್‌ಜಿ ಅರವಿಂದ್ ಕಾಮತ್ ವಾದಿಸಿ, ಆದೇಶವನ್ನು ಸಿಐಎಸ್‌ಎಫ್ ಅಧಿಕಾರಿಗಳು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಅರ್ಜಿದಾರರು ಎರಡು ದಿನಗಳ ಬಳಿಕ ಅಧಿಕಾರಿಗಳನ್ನು ಸಂಪರ್ಕಿಸಿದರೆ, 2025ರ ಮಾರ್ಚ್ 3ರ ಸಂಜೆ 4.30ರಿಂದ ಮಾರ್ಚ್ 4ರ ಬೆಳಿಗ್ಗೆ 11 ಗಂಟೆಯವರೆಗಿನ ವೀಡಿಯೋ ನೀಡಲಾಗುವುದು ಎಂದು ತಿಳಿಸಿದರು. ಈ ವಾದವನ್ನು ದಾಖಲಿಸಿಕೊಂಡ ಹೈಕೋರ್ಟ್, ಅಗತ್ಯ ಸಿಸಿಟಿವಿ ದೃಶ್ಯಾವಳಿ ಒದಗಿಸುವಂತೆ ಸೂಚಿಸಿ ಅರ್ಜಿಯನ್ನು ಮುಕ್ತಾಯಗೊಳಿಸಿತು.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ