Breaking News

ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು

Spread the love

ಆನೇಕಲ್: ರಸ್ತೆ ಗುಂಡಿ ತಪ್ಪಿಸಲು ಹೋಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿ  ಹಿಂಬದಿ ಕುಳಿತಿದ್ದ ಯುವತಿ ಸ್ಥಳದಲ್ಲೇ ಉಸಿರು ಚೆಲ್ಲಿರುವ ದಾರುಣ ಘಟನೆ ನಡೆದಿದೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಸಮೀಪದ ಅನಂತನಗರದಲ್ಲಿ ಈ ದುರಂತ ಸಂಭವಿಸಿದೆ. ಕೇರಳ ಮೂಲದ ಮೇಧಾ (32) ಮೃತ ಯುವತಿ. ಈಕೆ ಎಲೆಕ್ಟ್ರಾನಿಕ್ ಸಿಟಿಯ ಭವಿಷ್ಯ ನಿಧಿ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು.

ಮೇಧಾ ಅವರು ತಮ್ಮ ಸ್ನೇಹಿತ ಅಜಯ್ ಗುರು ಜೊತೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಮುಂದೆ ಸಾಗುತ್ತಿದ್ದ ಕಾರು ಚಾಲಕ ರಸ್ತೆ ಗುಂಡಿ ತಪ್ಪಿಸುವ ಸಲುವಾಗಿ ಬ್ರೇಕ್ ಹಾಕಿದ್ದಾನೆ. ಕಾರು ಚಾಲಕನ ನಿರ್ಲಕ್ಷ್ಯದಿಂದಾಗಿ ಹಿಂದೆ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿದೆ. ಈ ವೇಳೆ ಬೈಕ್‌ನ ಹಿಂಬದಿ ಕುಳಿತಿದ್ದ ಮೇಧಾ ರಸ್ತೆಗೆ ಬಿದ್ದಿದ್ದಾರೆ. ತಕ್ಷಣವೇ ಹಿಂಬದಿಯಿಂದ ವೇಗವಾಗಿ ಬಂದ ಮತ್ತೊಂದು ಗೂಡ್ಸ್ ವಾಹನ ಮೇಧಾ ಅವರ ಕುತ್ತಿಗೆ ಭಾಗದ ಮೇಲೆ ಹರಿದಿದೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ರೊಚ್ಚಿಗೆದ್ದ ಸ್ಥಳೀಯ ನಿವಾಸಿಗಳು ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಮೃತ ಮೇಧಾ ಆತ್ಮಕ್ಕೆ ಶಾಂತಿ ಕೋರಿ ಮೇಣದಬತ್ತಿ ಬೆಳಗಿ ಸಂತಾಪ ಸೂಚಿಸಿದ್ದಾರೆ ಸ್ಥಳೀಯರು.

ಸ್ಥಳದಲ್ಲೇ ಬೃಹತ್ ಪ್ರತಿಭಟನೆ ನಡೆಸಿ ಸ್ಥಳೀಯರು, ಎಲೆಕ್ಟ್ರಾನಿಕ್ ಸಿಟಿ ಹಾಗೂ ಸುತ್ತಮುತ್ತಲಿನ ರಸ್ತೆಗಳು ಅತ್ಯಂತ ಕಳಪೆಯಾಗಿದ್ದು, ಗುಂಡಿಗಳಿಂದ ತುಂಬಿವೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆಗಳನ್ನ ದುರಸ್ತಿ ಮಾಡಿಸಬೇಕು ಎಂದು ಆಕ್ರೋಶ ಹೊರಹಾಕಿದರು. ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೀದರ್ ATM ದರೋಡೆಕೋರರು ಕೊನೆಗೂ ಅರೆಸ್ಟ್‌

Spread the loveಬಿಹಾರದಲ್ಲಿ  ಆರೋಪಿಗಳ ಕಾರು ಬೆನ್ನಟ್ಟಿ ಸಿನಿಮೀಯ ರೀತಿಯಲ್ಲಿ ಅಮನ್‌ಕುಮಾರ್ ಸಿಂಗ್ & ಅಲೋಕ್‌ಕುಮಾರ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ‌‌‌‌. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ