ಬೆಂಗಳೂರು: ಮಕ್ಕಳ ಅಶ್ಲೀಲ ಚಿತ್ರಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ರೌಡಿಶೀಟರ್‌ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಜುನಾಥ್ ಅಲಿಯಾಸ್ ಕೋಳಿ ಮಂಜ ಬಂಧಿತ ರೌಡಿಶೀಟರ್. ಆರೋಪಿ ಚಾಮರಾಜಪೇಟೆ ಮೂಲದವನಾಗಿದ್ದು, ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದನು.
ಬಂಧಿತ ಆರೋಪಿ ಮಕ್ಕಳ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕಿ ಲೈಂಗಿಕ ಅಪರಾಧ ಮಾಡುತ್ತಿದ್ದನು. ಆರೋಪಿ ವಿರುದ್ಧ ಕ್ರಮ ಜರಗಿಸುವಂತೆ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಸಾರ್ವಜನಿಕರು ದೂರು ನೀಡಿದ್ದರು.
ಇದೀಗ ಸಾರ್ವಜನಿಕರು ನೀಡಿದ ದೂರಿನ ಅನ್ವಯ ಪೊಲೀಸರು ಆರೋಪಿ ಮಂಜುನಾಥ್‍ನನ್ನು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಕಳ್ಳತನ, ದರೋಡೆ, ಸೇರಿದಂತೆ ಬೇರೆ ಬೇರೆ ಪ್ರಕರಣಗಳಿವೆ.
Laxmi News 24×7