ಶಿವಮೊಗ್ಗ: ನಗರದ ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್ನಿಂದ ಗೋಪಿ ವೃತ್ತದವರೆಗೆ ತಿರಂಗ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಯಾತ್ರೆಯಲ್ಲಿ ಈಸೂರು ದಂಗೆಯ ಸ್ತಬ್ಧಚಿತ್ರಗಳು ಜನರ ಗಮನ ಸೆಳೆಯಿತು.
ತಿರಂಗ ಯಾತ್ರೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ ಭಾಗಿಯಾಗಿ, ದೇಶದ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ ದೇಶಕ್ಕಾಗಿ ಏನಾದ್ರೂ ಕೊಡುಗೆ ನೀಡುವ ಸಂಕಲ್ಪ ಮಾಡೋಣ ಎಂದು ಕರೆ ನೀಡಿದರು.
‘ಏಕ್ ಭಾರತ್ ಶ್ರೇಷ್ಠ ಭಾರತ್’ ತಿರಂಗಾ ಯಾತ್ರೆ ಮೂಲಕ ದೇಶದ ಜನರನ್ನು ಒಗ್ಗೂಡಿಸುವ ಮತ್ತು ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದವರ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ತಿರಂಗಾ ಯಾತ್ರೆ ಆಯೋಜಿಸಲಾಗಿದೆ. ಸ್ವಾತಂತ್ರ್ಯ ಯೋಧರನ್ನು ಸ್ಮರಿಸುವ ದಿನವಾಗಿದೆ. ಎಲ್ಲಾ ಶಾಲಾ-ಕಾಲೇಜು ಮತ್ತು ಸರ್ಕಾರಿ ಸಮಾರಂಭಗಳಲ್ಲಿ ವಂದೇ ಮಾತರಂ ಹಾಡಬೇಕೆಂದು ಕೇಂದ್ರ ಸರ್ಕಾರ ಕಾನೂನು ಮಾಡಿದೆ ಎಂದರು.
ಸ್ವಾತಂತ್ರ್ಯ ಪೂರ್ವದಲ್ಲೇ ಸ್ವಾತಂತ್ರ್ಯ ಘೋಷಿಸಿದ ಶಿಕಾರಿಪುರದ ಈಸೂರು ಗ್ರಾಮದಿಂದ ಬ್ರಿಟೀಷರ ವಿರುದ್ಧ ಹೋರಾಡಿ 5 ಜನರನ್ನು ಸಾಮೂಹಿಕವಾಗಿ ಗಲ್ಲಿಗೇರಿಸಿದ್ದನ್ನು ನಾವು ಕೇಳಿದ್ದೇವೆ. ಇಂದು ಈ ರೀತಿಯ 9 ಟ್ಯಾಬ್ಲೋಗಳನ್ನು ನಿರ್ಮಿಸಿ ವಿದ್ಯಾರ್ಥಿಗಳಲ್ಲಿ ಸ್ವಾತಂತ್ರ್ಯದ ಅರಿವು ಮೂಡಿಸುವುದು ಉತ್ತಮ ಕಾರ್ಯ. ಸ್ವಾತಂತ್ರ್ಯ ಯೋಧರ ತ್ಯಾಗ ಅರ್ಥ ಮಾಡಿಕೊಳ್ಳಲು ಈ ಕಾರ್ಯಕ್ರಮ ಮಾಡಿದ್ದು, ಇನ್ನಾದರೂ ನಾವು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದವನ್ನು ಅರಿತುಕೊಳ್ಳಲೇಬೇಕು. ಲಕ್ಷಗಟ್ಟಲೇ ಜನ ಪ್ರಾಣ ತೆತ್ತಿದ್ದಾರೆ. ಅವರ ತ್ಯಾಗಕ್ಕಾಗಿ ನಮ್ಮಿಂದ ಏನಾದರೂ ದೇಶಕ್ಕೆ ಕೊಡುಗೆ ಕೊಡುವ ರೂಪದಲ್ಲಿ ನಾವು ನಮ್ಮ ಜೀವನವನ್ನು ಬೆಳೆಸಿಕೊಂಡು ದೇಶದ ಐಕ್ಯತೆ ಮತ್ತು ಸಮಗ್ರತೆಗೆ ಒಂದಾಗೋಣ ಎಂದರು.
ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ಸಾವಿರಾರು ವಿದ್ಯಾರ್ಥಿಗಳ ಜೊತೆಗೆ ಸಾಗಿದ ಈ ಬೃಹತ್ ತಿರಂಗಾ ಯಾತ್ರೆಯಲ್ಲಿ 8 ವೈವಿಧ್ಯಮಯ ಟ್ಯಾಬ್ಲೋಗಳು ಗೋಪಿ ವೃತ್ತದವರೆಗೆ ಸಾಗಿ ಬಂದವು.
Laxmi News 24×7