Breaking News

ಅಂಡಮಾನ್‌ ಸಮುದ್ರದಲ್ಲಿ ಅತಿ ದೊಡ್ಡ ತ್ರಿವರ್ಣ ಧ್ವಜ ಅನಾವರಣ – ಆರ್‌.ಅಶೋಕ್‌ ಪುತ್ರ ಶರತ್‌ಗೆ ಸನ್ಮಾನ

Spread the love

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸ್ವರಾಜ್‌ ದ್ವೀಪ್‌ನಲ್ಲಿ ಸಮುದ್ರದ ನೀರಿನಲ್ಲಿ ಅತಿ ದೊಡ್ಡ ರಾಷ್ಟ್ರಧ್ವಜ  ಹಾರಿಸುವ ಮೂಲಕ ಐತಿಹಾಸಿಕ ಸಾಧನೆಯಲ್ಲಿ ಭಾಗಿಯಾದ ಬೆಂಗಳೂರಿನ ಶರತ್ ಅಶೋಕ್  ಅವರನ್ನು ಅಂಡಮಾನ್‌ ನಿಕೋಬಾರ್‌ನ ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ.ಕೆ.ಜೋಶಿ ಸನ್ಮಾನಿಸಿದರು.

ಲೋಕ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿನ್ನೆಸ್ ವಿಶ್ವ ದಾಖಲೆಯ ಪ್ರಮಾಣ ಪತ್ರವನ್ನು ಲೆಪ್ಟಿನೆಂಟ್‌ ಗರ್ವನರ್‌ ಅಡ್ಮಿರಲ್ ಡಿ.ಕೆ.ಜೋಶಿ, ಶರತ್‌ ಅಶೋಕ್‌ ಅವರಿಗೆ ನೀಡಿ ಸನ್ಮಾನಿಸಿದರು. 2026 ರ ಮೇ 2 ರಂದು ಅಂಡಮಾನ್‌-ನಿಕೋಬಾರ್‌ನ ಸ್ವರಾಜ್‌ ದ್ವೀಪದ (ಹ್ಯಾವ್ಲಾಕ್‌ ದ್ವೀಪ) ಬಳಿ ಸುಮಾರು 200 ಸ್ಕೂಬಾ ಡೈವರ್‌ಗಳು ಭಾರತದ ತ್ರಿವರ್ಣ ಧ್ವಜವನ್ನು ಹೊತ್ತೊಯ್ದು ಅದನ್ನು ಸಮುದ್ರದ ನೀರಿನೊಳಗಿಟ್ಟು ಅನಾವರಣ ಮಾಡಿದ್ದರು. 60×40 ಮೀಟರ್‌ (2,400 ಚದರ ಮೀಟರ್) ವಿಸ್ತೀರ್ಣದ ಈ ಧ್ವಜವನ್ನು ಭಾರತೀಯ ನೌಕಾಪಡೆ, ಕರಾವಳಿ ಕಾವಲು ಪಡೆ, ಪೊಲೀಸರು ಹಾಗೂ ಅರಣ್ಯ ಪಡೆಯ ನೆರವಿನೊಂದಿಗೆ ಡೈವರ್‌ಗಳು ಸಮುದ್ರಕ್ಕೆ ಹೊತ್ತೊಯ್ದಿದ್ದರು. ಈ ಮೂಲಕ ದೇಶದಲ್ಲೇ ಮೊದಲ ಬಾರಿಗೆ ಬೃಹತ್‌ ಧ್ವಜವನ್ನು ಸಮುದ್ರದ ನೀರಿನಲ್ಲಿ ಪ್ರದರ್ಶನ ಮಾಡಿದ ದಾಖಲೆ ಸೃಷ್ಟಿಯಾಯಿತು. ಇದು ಗಿನ್ನೆಸ್‌ ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ.

ಈ ಕುರಿತು ಸಂತಸ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ (R.Ashok), ಶರತ್‌ನ ತಂದೆಯಾಗಿ ನನಗೆ ಈ ಬಗ್ಗೆ ಬಹಳ ಹೆಮ್ಮೆ ಉಂಟಾಗಿದ್ದು, ಇದು ಅತ್ಯಂತ ಭಾವುಕ ಕ್ಷಣವಾಗಿದೆ. ನನ್ನ ಮಗ ಸ್ವರಾಜ್‌ ದ್ವೀಪದಲ್ಲಿ ಅತಿ ದೊಡ್ಡ ರಾಷ್ಟ್ರಧ್ವಜವನ್ನು ಅನಾವರಣ ಮಾಡುವ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಅದು ಗಿನ್ನೆಸ್‌ ವಿಶ್ವ ದಾಖಲೆಗೆ ಸೇರಿರುವುದು ಹಾಗೂ ಲೋಕ ನಿವಾಸದಲ್ಲಿ ಅಂಡಮಾನ್ ಮತ್ತು ನಿಕೋಬಾರ್ ಆಡಳಿತದಿಂದ ಸನ್ಮಾನ ಪಡೆದಿರುವುದು ಹೆಮ್ಮೆಯ ಸಂಗತಿ. ಸಾಗರದಲ್ಲಿ ನಮ್ಮ ತ್ರಿವರ್ಣ ಧ್ವಜವನ್ನು ಹಾರಿಸಲು ಮತ್ತು ಗಿನ್ನೆಸ್ ವಿಶ್ವ ದಾಖಲೆ ಮಾಡಲು ನನ್ನ ಮಗ ಹಾಗೂ ಇಡೀ ತಂಡದವರು ಅಸಾಧಾರಣ ಧೈರ್ಯ, ಸಮರ್ಪಣೆ, ಶಿಸ್ತು ಮತ್ತು ಶ್ರಮ ವಹಿಸಿದ್ದರು ಎಂದು ಶ್ಲಾಘಿಸಿದ್ದಾರೆ.

ನನ್ನ ಮಗ ರಾಷ್ಟ್ರಕ್ಕೆ ಹೆಮ್ಮೆ ತರುವ ಸಾಧನೆಗೆ ಕೊಡುಗೆ ನೀಡಿರುವುದನ್ನು ನೋಡುವುದು ಎಂದರೆ ಅದು ಪದಗಳಲ್ಲಿ ವ್ಯಕ್ತಪಡಿಸಲಾಗದ ಭಾವನೆಯಾಗಿದೆ ಎಂದು ಅವರು ಸಂತಸ ಹಂಚಿಕೊಂಡಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ