Breaking News

ಸ್ವಾತಂತ್ರ್ಯೋತ್ಸವ ಸಂಭ್ರಮ – ಹೆಲಿಕಾಪ್ಟರ್‌ನಲ್ಲಿ ಹಾರಾಡಿದ ಕಡೇನಂದಿಹಳ್ಳಿ ಸರ್ಕಾರಿ ಶಾಲೆ ಮಕ್ಕಳು

Spread the love

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ  ತಾಲೂಕಿನ ಕಡೇನಂದಿಹಳ್ಳಿ  ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು  80ನೇ ಸ್ವಾತಂತ್ರ್ಯ ದಿನಾಚರಣೆಯನ್ನ  ವಿಶೇಷವಾಗಿ ಆಚರಿಸಿಕೊಂಡಿದ್ದಾರೆ.

ಸ್ವಾತಂತ್ರ್ಯೋತ್ಸವದ ವಿಶೇಷ ದಿನದಂದು ಶಾಲೆಯ 12 ಪ್ರತಿಭಾವಂತ ವಿದ್ಯಾರ್ಥಿಗಳು ಹೆಲಿಕಾಪ್ಟರ್‌ನಲ್ಲಿ ಹಾರಾಡಿ ಸಂಭ್ರಮಿಸಿದ್ದಾರೆ. ಕಡೇನಂದಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಮತ್ತು ಕ್ರೀಡೆಯಲ್ಲಿ ಪ್ರತಿಭಾನ್ವಿತರಾದ ಮಕ್ಕಳನ್ನು ಹೆಲಿಕಾಪ್ಟರ್‌ ಪ್ರಯಾಣಕ್ಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು. ಆದರಂತೆ ಜಾನ್ಹವಿ, ಧ್ರುವ, ಹೇಮಂತ್, ಜೀವಿತಾ, ಚಂದನ್, ನಂದನ್, ವಿದ್ಯಾಶ್ರೀ, ಪೃಥ್ವಿಕ್, ರಚಿತಾ, ವಿಜಯ್, ಅನುಶ್ರೀ ಹಾಗೂ ಜೀವನ್ ಹೆಲಿಕಾಪ್ಟರ್ ಹತ್ತಿ ಸಂಭ್ರಮಿಸಿದ್ದಾರೆ.

ಕಡೇನಂದಿಹಳ್ಳಿಯ ಸರ್ಕಾರಿ ಶಾಲೆಯನ್ನು ಹಳೇ ವಿದ್ಯಾರ್ಥಿಗಳ ಸಂಘ ನೇತೃತ್ವದಲ್ಲಿ ಬೆಂಗಳೂರು ಮೂಲದ ವಿಶ್ವಾಗ್ರಹ ಫೌಂಡೇಶನ್ ಸಂಸ್ಥೆ ದತ್ತು ಪಡೆದಿದೆ. ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಇಂದು ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಬೆಂಗಳೂರಿನ ವಿಶ್ವಾಗ್ರಹ ಫೌಂಡೇಶನ್ ಮುಖ್ಯಸ್ಥರಾದ ಡಾ. ಶಿವಕುಮಾರ್ ಅವರು ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ್ದರು. ಇದಕ್ಕಾಗಿ ಶಾಲೆಯ ಬಳಿಯ ಹೆಲಿಪ್ಯಾಡ್ ಕೂಡ ನಿರ್ಮಾಣ ಮಾಡಲಾಗಿತ್ತು.

ಈ ಕಾರ್ಯಕ್ರಮ ಮುಗಿದ ಬಳಿಕ ಸರ್ಕಾರಿ ಶಾಲೆಯ ಮಕ್ಕಳು ಉನ್ನತ ಕನಸುಗಳನ್ನು ಕಾಣಬೇಕು ಮತ್ತು ಶಿಕ್ಷಣದ ಕಡೆಗೆ ಹೆಚ್ಚಿನ ಸ್ಪೂರ್ತಿ ಪಡೆಯಬೇಕು ಎಂಬ ಸದುದ್ದೇಶದಿಂದ ಹೆಲಿಕಾಪ್ಟರ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ