Breaking News

ಚಾ.ನಗರದಲ್ಲಿ ಮೂವರು ತಮಿಳಿಗರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ: ತಮಿಳುನಾಡು ಸಿಎಂ ಖಂಡನೆ

Spread the love

ಚೆನ್ನೈ: ಚಾಮರಾಜನಗರ ಜಿಲ್ಲೆಯಲ್ಲಿ ಅರಣ್ಯಾಧಿಕಾರಿಗಳು ಮೂವರು ತಮಿಳಿಗರಿಗೆ ಗುಂಡಿಕ್ಕಿ ಹತ್ಯೆ ಮಾಡಿರುವುದು ಖಂಡನೀಯ ಎಂದು ತಮಿಳುನಾಡು ಸಿಎಂ ವಿಜಯ್ ಹೇಳಿದ್ದಾರೆ.

ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಿಎಂ ವಿಜಯ್, ‘ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹಳ್ಳಿಗಳಲ್ಲಿ ವಾಸಿಸುತ್ತಿದ್ದ ತಮಿಳರಾದ ಆಂಥೋನಿ ಸಾಮಿ, ಜಾನ್ ರೋಸ್ ಪೀಟರ್ ಮತ್ತು ಕುಮಾರ್ ಅವರನ್ನು ಆಗಸ್ಟ್ 15 ರ ಮುಂಜಾನೆ ಕಾವೇರಿ ವನ್ಯಜೀವಿ ಅಭಯಾರಣ್ಯ ಪ್ರದೇಶದಲ್ಲಿ ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿಗಳು ಗುಂಡಿಕ್ಕಿ ಕೊಂದರು. ಈ ಹತ್ಯಾಕಾಂಡವನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಅರಣ್ಯ ಇಲಾಖೆ ನೀಡಿರುವ ವಿವರಣೆ ಸ್ವೀಕಾರಾರ್ಹವಲ್ಲ. ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಕರ್ನಾಟಕ ಸರ್ಕಾರವು ಸಂತ್ರಸ್ತರ ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಬೇಕು ಎಂದು ಸಿಎಂ ವಿಜಯ್ ಆಗ್ರಹಿಸಿದ್ದಾರೆ.

ಶಂಕಿತ ಬೇಟೆಗಾರರು ವನ್ಯಜೀವಿಗಳನ್ನು ಬೇಟೆಯಾಡಲು ಕಾಡಿಗೆ ಪ್ರವೇಶಿಸಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಅರಣ್ಯ ಅಧಿಕಾರಿಗಳು ಆ ಪ್ರದೇಶಕ್ಕೆ ಧಾವಿಸಿದ್ದರು. ಬೇಟೆಗಾರರು ಅರಣ್ಯ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದ್ದರು. ಇದಕ್ಕೆ ಪ್ರತಿಯಾಗಿ ಅರಣ್ಯ ಸಿಬ್ಬಂದಿಯೂ ಪ್ರತಿದಾಳಿ ನಡೆಸಿದರು. ಇದರಿಂದಾಗಿ ಗುಂಡಿನ ಚಕಮಕಿ ನಡೆಯಿತು. ಗುಂಡಿನ ಚಕಮಕಿಯಲ್ಲಿ ಬೇಟೆಗಾರರು ಎಂದು ಶಂಕಿಸಲಾದ ಮೂವರು ಪುರುಷರು ಸಾವನ್ನಪ್ಪಿದರು. ಮೃತರು ಆಂಟನಿ ಸ್ವಾಮಿ, ಪೀಟರ್ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ ಎಂದು ಅರಣ್ಯ ಇಲಾಖೆ ಸ್ಪಷ್ಟಪಡಿಸಿತ್ತು.


Spread the love

About Laxminews 24x7

Check Also

ಹೆಂಡತಿಯ ಹತ್ಯೆಗೈದ BSF ಯೋಧ – ಮಹಡಿಯಿಂದ ಬಿದ್ದು ಸಾವು ಎಂದು ಬಿಂಬಿಸಲು ಯತ್ನ

Spread the loveಚಂಡೀಗಢ: ರಜೆ ಮೇಲೆ ಮನೆಗೆ ಬಂದಿದ್ದ ಗಡಿ ಭದ್ರತಾ ಪಡೆ ಯೋಧನೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ