Breaking News

ಅಪಾರ್ಟ್‌ಮೆಂಟ್ ಮನೆ ಬೀಗ ಮುರಿದು 1.55 ಲಕ್ಷ ಮೌಲ್ಯದ ಲ್ಯಾಪ್‌ಟಾಪ್, ಮೊಬೈಲ್ ಕಳವು

Spread the love

ಹುಬ್ಬಳ್ಳಿ: ಅಪಾರ್ಟ್‌ಮೆಂಟ್‌ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಬೀಗ ಮುರಿದು ಲ್ಯಾಪ್‌ಟಾಪ್ ಹಾಗೂ ಮೊಬೈಲ್ ಫೋನ್ ಕದ್ದೊಯ್ದಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರದಲ್ಲಿ ನಡೆದಿದೆ.

ಹುಬ್ಬಳ್ಳಿಯ ವಿದ್ಯಾನಗರದ ಶಿರೂರ ಪಾರ್ಕ್‌ನ ಸೃಷ್ಟಿ ಎಲೈಟ್ ಅಪಾರ್ಟ್‌ಮೆಂಟ್‌ನಲ್ಲಿ ಈ ಕಳ್ಳತನ ನಡೆದಿದೆ. ಶದರ್‌ಕುಮಾರ ಮೌರ್ಯ ಎಂಬುವರ ಮನೆಗೆ ಬೀಗ ಹಾಕಿದ್ದ ವೇಳೆ ಕಳ್ಳರು ಕೃತ್ಯ ಎಸಗಿದ್ದಾರೆ.

ಮನೆಯ ಬಾಗಿಲಿನ ಬೀಗ ಮುರಿದು ಒಳಗೆ ಪ್ರವೇಶಿಸಿದ ಕಳ್ಳರು, 1.55 ಲಕ್ಷ ಮೌಲ್ಯದ ಲ್ಯಾಪ್‌ಟಾಪ್ ಹಾಗೂ ಮೊಬೈಲ್ ಫೋನ್ ಕಳವು ಮಾಡಿದ್ದಾರೆ. ಮನೆಗೆ ವಾಪಸ್ ಬಂದ ಬಳಿಕ ಕಳ್ಳತನ ನಡೆದಿರುವುದು ಗೊತ್ತಾಗಿದೆ.

ಘಟನೆ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.

ಅಪಾರ್ಟ್‌ಮೆಂಟ್‌ನಲ್ಲೇ ಬೀಗ ಮುರಿದು ಕಳ್ಳತನ ನಡೆದಿರುವುದರಿಂದ ನಿವಾಸಿಗಳು ಆತಂಕಗೊಂಡಿದ್ದಾರೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.


Spread the love

About Laxminews 24x7

Check Also

ಗ್ರಾಮದಲ್ಲಿ ಮೊಸಳೆ ಪ್ರತ್ಯಕ್ಷ; ಮನೆಗಳ ಬಳಿಯೇ ಮರಿಗಳ ಓಡಾಟ

Spread the loveಗದಗ: ತುಂಗಭದ್ರಾ ನದಿ ಸಮೀಪದಲ್ಲಿರುವ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ಮೊಸಳೆ ಹಾಗೂ ಮೊಸಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ