Breaking News

ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು – ನಿವೃತ್ತ ಶಿಕ್ಷಕನ ಬರ್ಬರ ಹತ್ಯೆ

Spread the love

ವಿಜಯಪುರ: ಭೀಮಾ ತೀರದಲ್ಲಿ  ಮತ್ತೊಮ್ಮೆ ನೆತ್ತರು ಹರಿದಿದೆ. ನಿವೃತ್ತ ಶಿಕ್ಷಕನ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ವಿಜಯಪುರ  ಜಿಲ್ಲೆಯ ಇಂಡಿ ತಾಲೂಕಿನ ಚೌಡಿಹಾಳ ರಸ್ತೆಯ ಪೂಜಾರಿ ವಸ್ತಿ ಬಳಿ ನಡೆದಿದೆ.

ಸಿದ್ದಪ್ಪ ಅಂಜುಟಗಿ (63) ಹತ್ಯೆಯಾದ ನಿವೃತ್ತ ಶಿಕ್ಷಕ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹತ್ಯೆ ಬಳಿಕ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಇಂಡಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನಾ ಸ್ಥಳದಲ್ಲಿ ಸಿಕ್ಕ ಮಾಹಿತಿ ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ನಿವೃತ್ತ ಶಿಕ್ಷಕನ ಹತ್ಯೆಯಿಂದ ಭೀಮಾತೀರದ ಜನ ಬೆಚ್ಚಿಬಿದ್ದಿದ್ದಾರೆ. ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ತಿಳಿದು ಬರಲಿದೆ. ಇಂಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಗ್ರಾಮದಲ್ಲಿ ಮೊಸಳೆ ಪ್ರತ್ಯಕ್ಷ; ಮನೆಗಳ ಬಳಿಯೇ ಮರಿಗಳ ಓಡಾಟ

Spread the loveಗದಗ: ತುಂಗಭದ್ರಾ ನದಿ ಸಮೀಪದಲ್ಲಿರುವ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ಮೊಸಳೆ ಹಾಗೂ ಮೊಸಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ