Breaking News

ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್

Spread the love

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್  ಅವರಿಂದು (ಆ.17) ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಈ ಕುರಿತು ಸಿಎಂ ಫಡ್ನವೀಸ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಭೇಟಿ ವೇಳೆ ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಹಾಗೂ ಕೇಂದ್ರ-ರಾಜ್ಯ ಜಂಟಿ ಯೋಜನೆಗಳಿಗೆ ಹೆಚ್ಚಿನ ಬೆಂಬಲ ಕೋರುವ ಕುರಿತು ಚರ್ಚೆ ನಡೆಸಿದ್ದಾಗಿ ತಿಳಿಸಿದ್ದಾರೆ.

ಎಕ್ಸ್ ಪೋಸ್ಟ್‌ನಲ್ಲಿ ಏನಿದೆ?
ಈ ಚರ್ಚೆಯ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅವರು, ಪ್ರಧಾನಮಂತ್ರಿಯವರ ಮಾರ್ಗದರ್ಶನ ಮಹಾರಾಷ್ಟ್ರದ ಬೆಳವಣಿಗೆಗೆ ಅತ್ಯಂತ ಮುಖ್ಯವಾದುದು. ಈ ಭೇಟಿಯು ತಮಗೆ ಸಕಾರಾತ್ಮಕ ಶಕ್ತಿಯನ್ನು ನೀಡಿದೆ. ಅಭಿವೃದ್ಧಿ ದೃಷ್ಟಿಯಿಂದ ಅವರ ಮಾರ್ಗದರ್ಶನ ಹಾಗೂ ರಾಜ್ಯಕ್ಕೆ ಅವರು ನೀಡುವ ಬೆಂಬಲಕ್ಕೆ ನಾನು ಕೃತಜ್ಞನಾಗಿದ್ದೇನೆ ಎಂದು ಧನ್ಯವಾದ ಅರ್ಪಿಸಿದ್ದಾರೆ.

ಪ್ರಧಾನಮಂತ್ರಿಯವರೊಂದಿಗಿನ ಮಾತುಕತೆಯ ಬಳಿಕ ಮುಂಬೈಗೆ ವಾಪಸಾಗಲಿರುವ ಮುಖ್ಯಮಂತ್ರಿಗಳು, ಮಂಗಳವಾರ (ಆ.18) ಮುಂಬೈನ `ದಿ ಲಲಿತ್’ ಹೋಟೆಲ್‌ನಲ್ಲಿ ಇಂಡೋ-ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಆಯೋಜಿಸಲಾಗಿರುವ 2026ರ ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಲಿದ್ದಾರೆ.

ನಿರ್ಮಲಾ ಸೀತಾರಾಮನ್‌ ಭೇಟಿಯಾದ ʻಮಹಾʼ ಸಿಎಂ:
ಇದೇ ವೇಳೆ ನಿರ್ಮಾಲಾ ಸೀತಾರಾಮನ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮುಂಬೈ-ವಧವನ್ ಎಕ್ಸ್‌ಪ್ರೆಸ್‌ವೇ ಸಂಪರ್ಕ ಯೋಜನೆಯಾದ ಉತ್ತನ್-ವಿರಾರ್ ಸಮುದ್ರ ಸೇತುವೆ ನಿರ್ಮಾಣಕ್ಕಾಗಿ ಜಪಾನ್ ಇಂಟರ್‌ನ್ಯಾಷನಲ್ ಕೋಆಪರೇಷನ್ ಏಜೆನ್ಸಿ (JICA)ಯಿಂದ ಧನಸಹಾಯವನ್ನು ಪಡೆಯಲು ಅನುಮೋದನೆ ಕೋರಿ ಮನವಿ ಸಲ್ಲಿಸಿದರು. ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ


Spread the love

About Laxminews 24x7

Check Also

ಬಿಜೆಪಿ ಐಟಿ ಸೆಲ್‌ನಿಂದ ಅಮಿತ್ ಮಾಳವೀಯ ಔಟ್‌, ದೀಪಕ್ ಮ್ಹಾಸ್ಕೆಗೆ ಜವಾಬ್ದಾರಿ

Spread the loveನವದೆಹಲಿ: ಉತ್ತರ ಪ್ರದೇಶ, ಪಂಜಾಬ್ ಮತ್ತು ಇತರ ಹಲವಾರು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳಿಗೆ ತಿಂಗಳುಗಳು ಬಾಕಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ