Breaking News

ರಾಜಕೀಯದಲ್ಲಿ ಯಾರೂ ಸತ್ಯಹರಿಶ್ಚಂದ್ರ, ಧರ್ಮರಾಯ ಇಲ್ಲ- ವಿರೋಧ ಪಕ್ಷದವರಿಗೆ ಎಂಟಿಬಿ ತಿರುಗೇಟು

Spread the love

ಬೆಂಗಳೂರು: ನಲವತ್ತು ವರ್ಷಗಳ ರಾಜಕೀಯದಲ್ಲಿ ಎಲ್ಲರನ್ನು ನೋಡಿದ್ದೇನೆ. ಆದರೆ ಸತ್ಯಹರಿಶ್ಚಂದ್ರ, ಧರ್ಮರಾಯ ಮತ್ತು ನಳ ಮಹಾರಾಜ ಯಾರೂ ನನ್ನ ಕಣ್ಣಿಗೆ ಬಿದ್ದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ.ನಾಗರಾಜ್ ವಿರೋಧ ಪಕ್ಷದವರ ಆರೋಪ, ಪ್ರತ್ಯಾರೋಪಗಳಿಗೆ ತಿರುಗೇಟು ನೀಡಿದರು.ಇಂದು ಹೊಸಕೋಟೆ ತಾಲೂಕಿನ ತಾವರೆಕೆರೆಗೆ ಎಂ.ಟಿ.ಬಿ.ನಾಗರಾಜ್ ಬಾಗಿನ ಅರ್ಪಿಸಿದ್ದಾರೆ. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿರೋಧ ಪಕ್ಷದವರು ಆರೋಪಗಳು, ಪ್ರತ್ಯಾರೋಪಗಳನ್ನು ಮೀಡಿಯಾದಲ್ಲಿ ಮಾಡಿದ್ದಾರೆ. ಯಾವ ಯಾವ ಕಾಲದಲ್ಲಿ ಯಾರ‍್ಯಾರು ಮುಖ್ಯಮಂತ್ರಿಗಳಾಗಿದ್ದರು. ಯಾವ ಮುಖ್ಯಮಂತ್ರಿ ಕಾಲದಲ್ಲಿ ಎಷ್ಟೆಷ್ಟು ಹಗರಣ ಆಗಿದ್ದಾವೆ ಎಂಬುದು ಎಲ್ಲರಿಗೂ ಗೊತ್ತಿದೆ. ಈಗ ರಾಜಕೀಯದಲ್ಲಿ ಯಾರೂ ಸತ್ಯಹರಿಶ್ಚಂದ್ರ, ಧರ್ಮರಾಯ ಮತ್ತು ನಳ ಮಹಾರಾಜರು ಇಲ್ಲ ಎಂದು ಹೇಳಿದರು

ನಲವತ್ತು ವರ್ಷಗಳ ರಾಜಕೀಯದಲ್ಲಿ ಎಲ್ಲರನ್ನು ನೋಡಿದ್ದೇನೆ. ಆದರೆ ಸತ್ಯಹರಿಶ್ಚಂದ್ರ, ಧರ್ಮರಾಯ ಮತ್ತು ನಳ ಮಹಾರಾಜ ಯಾರೂ ನನ್ನ ಕಣ್ಣಿಗೆ ಬಿದ್ದಿಲ್ಲ. ಸದ್ಯಕ್ಕೆ ಆರೋಪ, ಪ್ರತ್ಯಾರೋಪಗಳನ್ನು ಬದಿಗೊತ್ತಿ. ಇಂದು ನಾವು ಸಾವು-ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದೇವೆ. ರಾಜಕೀಯ ಮಾಡಿ, ಆದರೆ ಈ ಸಮಯದಲ್ಲಿ ಬೇಡ. ಶಾಸಕರು, ಸಚಿವರು, ಜನಪ್ರತಿನಿಧಿಗಳಾಗಲಿ ಎಲ್ಲರೂ ಆಸ್ಪತ್ರೆಗೆ ಹೋಗಬೇಕು. ಅಲ್ಲಿ ಉಸ್ತುವಾರಿ ವಹಿಸಿಕೊಂಡು ಕೊರೊನಾ ನಿಯಂತ್ರಿಸಲು ಕೆಲಸ ಮಾಡಬೇಕು ಎಂದು ಹೇಳಿದರು.

ವಿರೋಧ ಪಕ್ಷದವರು ಹೇಳುತ್ತಿರುವುದೆಲ್ಲ ಸತ್ಯಕ್ಕೆ ದೂರವಾದ ಮಾತು. ನಮ್ಮ ಬಳಿ ಎಲ್ಲದಕ್ಕೂ ದಾಖಲಾತಿ ಇದೆ. ಆದರೆ ಈಗ ರಾಜಕೀಯ ಮಾಡುವ ಸಮಯವಲ್ಲ. ಚುನಾವಣೆ ಬರುತ್ತದೆ ಅಂದು ರಾಜಕೀಯ ಮಾಡಿ. ದೇಶದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಅಬ್ಬರಿಸುತ್ತಿದೆ. ಆದರೆ ವಿರೋಧ ಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಎಂ.ಟಿ.ಬಿ.ನಾಗರಾಜ್ ಕಿಡಿಕಾರಿದರು.

 


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ