Breaking News

ಫ್ಲೈವುಡ್ ಗೋಡೌನ್ ನಲ್ಲಿ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂಪಾಯಿ ಮೌಲ್ಯದ ಯಂತ್ರೋಪಕರಣ ಸುಟ್ಟು ಭಸ್ಮ

Spread the love

ರಾಮನಗರ: ಇಲ್ಲಿನ ಟೌನ್ ವ್ಯಾಪ್ತಿಯ ಕೈಗಾರಿಕಾ ಪ್ರದೇಶದಲ್ಲಿರುವ ಫ್ಲೈವುಡ್ ಗೋಡೌನ್‌  ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಗೋಡೌನ್‌ನಲ್ಲಿದ್ದ ವಸ್ತುಗಳು ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ಸಂಭವಿಸಿದೆ.

ಈ ಗೋಡೌನ್ ಶೋಯೆಬ್ ಎಂಬುವವರಿಗೆ ಸೇರಿದ್ದಾಗಿದೆ. ಕಳೆದ ಹಲವು ವರ್ಷಗಳಿಂದ ಈ ಗೋಡೌನ್‌ಗೆ ಬೀಗ ಹಾಕಲಾಗಿತ್ತು ಎನ್ನಲಾಗಿದೆ.

ಇಂದು ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಗೋಡೌನ್‌ನಲ್ಲಿದ್ದ ಹಳೆಯ ಯಂತ್ರೋಪಕರಣಗಳು ಹಾಗೂ ಫ್ಲೈವುಡ್ ಶೀಟ್‌ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದು ಎಂದು ಶಂಕಿಸಲಾಗಿದೆ.

ಬೆಂಕಿ ಗಮನಿಸಿದ ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ