ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ 4 ಸ್ಥಾಯಿ ಸಮಿತಿಗಳ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆ ಸೋಮವಾರ ಪಾಲಿಕೆ ಪರಿಷತ್ ಸಭಾಭವನದಲ್ಲಿ ಜರುಗಿತು.
ಇತ್ತೀಚೆಗಷ್ಟೇ 4 ಸ್ಥಾಯಿ ಸಮಿತಿಗಳಿಗೆ 28 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದರು. ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆಯಲ್ಲಿ ಪ್ರತಿಯೊಂದು ಸಮಿತಿಗೆ ಒಂದೊಂದೇ ನಾಮಪತ್ರ ಸಲ್ಲಿಸಿದ್ದರಿಂದ ಅಧ್ಯಕ್ಷತೆ ವಹಿಸಿದ್ದ ಮೇಯರ್ ಪ್ರೀತಿ ಕಾಮಕರ್ ಅವರು ಅಧ್ಯಕ್ಷರುಗಳ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.
ಉಪಮೇಯರ ಹಣಮಂತ ಕೊಂಗಾಲಿ, ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಆಡಳಿತ ಪಕ್ಷದ ನಾಯಕ ಸಂತೋಷ ಪೇಡ್ನೇಕರ, ವಿರೋಧ ಪಕ್ಷದ ನಾಯಕ ಸೊಹೈಲ್ ಸಂಗೊಳ್ಳಿ, ಸ್ಥಾಯಿ ಸಮಿತಿ ಸದಸ್ಯರು, ನಗರಸೇವಕರು ಉಪಸ್ಥಿತರಿದ್ದರು.
ಆಯ್ಕೆಯಾದ ಅಧ್ಯಕ್ಷರುಗಳು
ತೆರಿಗೆ ನಿರ್ಧರಣೆ, ಹಣಕಾಸು ಹಾಗೂ ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ ಮೈಲುಗೋಳ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ರಾಜು ಭಾತಕಾಂಡೆ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೇಯಸ್ ನಾಕಾಡಿ, ಲೆಕ್ಕಗಳ ಸ್ಥಾಯಿ ಸಮಿತಿ ಅಧ್ಯಕ್ಷೆ ಸಾರಿಕಾ ಪಾಟೀಲ
ನೂತನ ಅಧ್ಯಕ್ಷರುಗಳಾಗಿ ಆಯ್ಕೆಯಾದರು.
ಚುನಾವಣಾ ಅಧಿಕಾರಿ, ಪರಿಷತ್ ಕಾರ್ಯದರ್ಶಿ ರಮೇಶ ಬಡಿಗೇರ, ಪರಿಷತ್ ವ್ಯವಸ್ಥಾಪಕಿ ಅಂಜನಾ ಭಜಂತ್ರಿ, ಮೇಯರ್ ಪ್ರೀತಿ ಕಾಮಕರ್, ಉಪಮೇಯರ್ ಹಣಮಂತ ಕೊಂಗಾಲಿ ಹಾಗೂ ಆಯುಕ್ತ ಕಾರ್ತಿಕ್ ಎಂ ಇದ್ದರು.
Laxmi News 24×7