Breaking News

2029ರ ಲೋಕಸಭಾ ಚುನಾವಣೆಗೆ ಮೋದಿ ಬೆಂಬಲಿಸಲು ಸರ್ಕಾರಿ ಹುದ್ದೆಗೆ ಪೊಲೀಸ್‌ ಕಾನ್‌ಸ್ಟೆಬಲ್‌ ರಾಜೀನಾಮೆ

Spread the love

ಗಾಂಧೀನಗರ: 2029ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಬೆಂಬಲ ನೀಡುವುದಕ್ಕಾಗಿ ಗುಜರಾತ್‌ನಲ್ಲಿ ಪೊಲೀಸ್‌ ಸಿಬ್ಬಂದಿಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಇತ್ತೀಚೆಗೆ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ವಿರೋಧಿ ನಿರೂಪಣೆಗಳು ಕಂಡುಬಂದವು. ಅದನ್ನು ಎದುರಿಸಲು ಬಿಜೆಪಿಗೆ ನೈತಿಕ ಬೆಂಬಲ ಘೋಷಿಸಿ ಗುಜರಾತ್ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರು ರಾಜೀನಾಮೆ ನೀಡಿದ್ದಾರೆ.

ಗಾಂಧಿಧಾಮದ ಪೂರ್ವ ಕಚ್‌ನಲ್ಲಿರುವ ಅದೇಸರ್ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ರಾಮಗಢ ಮೋಹನಗಢ ಗೋಸಾಯಿ, ಇತ್ತೀಚಿನ ರಾಜಕೀಯ ಬೆಳವಣಿಗೆಗಳು ತಮ್ಮನ್ನು ವೈಯಕ್ತಿಕ ತ್ಯಾಗ ಮಾಡಲು ಪ್ರೇರೇಪಿಸಿವೆ ಎಂದು ಹೇಳಿಕೊಂಡಿದ್ದಾರೆ. ಈ ಬಗ್ಗೆ ವೀಡಿಯೋ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬಹಳ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯ ನಂತರ ನನಗೆ ಈ ಸರ್ಕಾರಿ ಕೆಲಸ ಸಿಕ್ಕಿತು. ಆದರೆ, ಈಗ ಸೇವೆಯಿಂದ ಕೆಳಗಿಳಿಯುವ ನಿರ್ಧರಿಸಿದ್ದೇನೆ ಎಂದು ಗೋಸಾಯಿ ತಿಳಿಸಿದ್ದಾರೆ. ಜಂತರ್ ಮಂತರ್ ಪ್ರತಿಭಟನೆಯ ನಂತರ ಪ್ರಧಾನಿಯವರು ದೇಶದ ಯುವಜನರ ಪರವಾಗಿ ನಿರ್ಧಾರಗಳನ್ನು ತೆಗೆದುಕೊಂಡರು. ಇದು ಸರ್ಕಾರಿ ಸೇವೆಗಿಂತ ಹೆಚ್ಚಾಗಿ ನಾಗರಿಕ ಮತ್ತು ಸಾಮಾಜಿಕ-ರಾಜಕೀಯ ಚಟುವಟಿಕೆಗೆ ನನ್ನ ಜೀವನವನ್ನು ಮುಡಿಪಾಗಿಡಲು ಪ್ರೇರೇಪಿಸಿತು ಎಂದು ತಿಳಿಸಿದ್ದಾರೆ.  ನಡೆದ ಪ್ರತಿಭಟನೆಯ ನಂತರ ಮತ್ತು ಯುವಕರ ಪರವಾಗಿ ಮೋದಿ ಸಾಹೇಬ್ ತೆಗೆದುಕೊಂಡ ನಿರ್ಧಾರಗಳನ್ನು ಒಪ್ಪಿಕೊಂಡು, ಮೋದಿ ಸರ್ಕಾರ ಮತ್ತು ಸಂಘವನ್ನು ಬೆಂಬಲಿಸಲು ನಾನು ನನ್ನ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ. ಯಾವುದೇ ವೈಯಕ್ತಿಕ ಹಿತಾಸಕ್ತಿ ಇಲ್ಲದೆ ನಿಸ್ವಾರ್ಥ ರಾಷ್ಟ್ರೀಯ ಸೇವೆಗೆ ಸಮರ್ಪಿತವಾದ ಸಂಘಟನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ನನ್ನ ಜೀವನ ಮತ್ತು ಸೇವೆಯನ್ನು ಅರ್ಪಿಸಲು ನಾನು ಈಗ ಬಯಸುತ್ತೇನೆ ಎಂದು ವೀಡಿಯೋ ಸಂದೇಶದಲ್ಲಿ ಹೇಳಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ