Breaking News

ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನ ಹಂಚಿಕೆ: ಡಿಸಿಎಂ ಪರಮೇಶ್ವರ್

Spread the love

ಬೆಂಗಳೂರು: ಖಾಲಿ ಇರುವ ಸರ್ಕಾರಿ ಜಮೀನು ಗುರುತಿಸಿ, ನಿವೇಶನ ರಚಿಸಿ, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನ ಹಂಚಿಕೆಗೆ ಡಿಸಿಎಂ ಜಿ.ಪರಮೇಶ್ವರ್ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಮ್ಮ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಎಲ್ಲಾ ವಸತಿ ರಹಿತರಿಗೆ ನಿವೇಶನಗಳನ್ನು ನೀಡುತ್ತೇವೆಂದು ಘೋಷಿಸಿದ್ದೆವು. ಅದರಂತೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರವು ಉದ್ದೇಶಿಸಿದ್ದು, ಗ್ರಾಮೀಣ ಪ್ರದೇಶಗಳಲ್ಲಿ 30×40 ಅಡಿ ಅಳತೆಯ ಹಾಗೂ ನಗರ ಪ್ರದೇಶಗಳಲ್ಲಿ 20×30 ಅಡಿ ಅಳತೆಯ ನಿವೇಶನಗಳನ್ನು ಸಿದ್ಧಪಡಿಸಿ ಅರ್ಹರಿಗೆ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಲಭ್ಯವಿರುವ ಹಾಗೂ ಖಾಲಿ ಇರುವ ಸರ್ಕಾರಿ ಜಮೀನುಗಳನ್ನು ತಕ್ಷಣವೇ ಗುರುತಿಸಿ, ನಿವೇಶನಗಳ ರಚನೆಗೆ ಅಗತ್ಯವಿರುವ ಎಲ್ಲಾ ಪ್ರಕ್ರಿಯೆಗಳನ್ನು ಯಾವುದೇ ವಿಳಂಬಕ್ಕೆ ಆಸ್ಪದ ನೀಡದೇ ತುರ್ತಾಗಿ ಕೈಗೊಳ್ಳುವಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ನಾವು ಕೊಟ್ಟ ಮಾತಿಗೆ ಬದ್ಧರಾಗಿ, ಪ್ರಣಾಳಿಕೆಯ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದು ನುಡಿದಂತೆ ನಡೆಯುತ್ತಿದ್ದೇವೆ. ಸರ್ವರಿಗೂ ಸ್ವಂತ ಸೂರಿನ ಭಾಗ್ಯವನ್ನು ನೀಡಿ, ಎಲ್ಲರೂ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ನಮ್ಮ ಆಶಯ ಎಂದಿದ್ದಾರೆ.


Spread the love

About Laxminews 24x7

Check Also

ತುಮಕೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್

Spread the loveತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕೊಡಿಗೇನಹಳ್ಳಿ ಪೊಲೀಸರು  ಬಂಧಿಸಿರುವ ಘಟನೆ ಮಧುಗಿರಿ ತಾಲೂಕಿನ ಕಸಿನಾಯಕನಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ