ಹಾವೇರಿ: ಮೊಬೈಲ್ ಕ್ಯಾಂಟೀನ್ಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡಲು 20 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಸಮಾಲೋಚಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಹಾವೇರಿ ನಗರದ ಜಿಲ್ಲಾಕ್ರೀಡಾಂಗಣದ ಬಳಿಯ ರಸ್ತೆಯಲ್ಲಿ ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ.
ಮಲಕಸಾಬ್ ನದಾಫ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಸಮಾಲೋಚಕರಾಗಿ ಕೆಲಸ ಮಾಡುತ್ತಿದ್ದ. ಮೊಬೈಲ್ ಕ್ಯಾಂಟೀನ್ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಿದ್ದ ರವಿಚಂದ್ರ ಮೈದೂರು ಅವರಿಂದ 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ.
ರವಿಚಂದ್ರ ಮೈದೂರು ಅವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಹಾವೇರಿ ನಗರದ ಜಿಲ್ಲಾಕ್ರೀಡಾಂಗಣದ ಬಳಿ ಹಣ ಪಡೆಯುತ್ತಿದ್ದ ವೇಳೆ ಮಲಕಸಾಬ್ ನದಾಫ್ನನ್ನು ವಶಕ್ಕೆ ಪಡೆದಿದ್ದಾರೆ.
ಹಾವೇರಿ ಲೋಕಾಯುಕ್ತ ಡಿವೈಎಸ್ಪಿ ಮಧುಸೂದನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಆರೋಪಿ ಅಧಿಕಾರಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ
Laxmi News 24×7