ಬೆಳಗಾವಿ: ಬಿಮ್ಸ್ ಆಸ್ಪತ್ರೆಯಲ್ಲಿ ಒಪಿಡಿ ಬಂದ್ ಮಾಡಿರುವ ಹಿನ್ನೆಲೆ ಸಾಮಾನ್ಯ ರೋಗಿಗಳು ಪರದಾಡುವಂತಾಗಿದೆ. ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ ಮಾಡಿರುವ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ಒಪಿಡಿ ಬಂದ್ ಮಾಡಲಾಗಿದೆ.
ಆಸ್ಪತ್ರೆಗೆ ಬರುವ ಸಾಮಾನ್ಯ ರೋಗಿಗಳನ್ನು ಯಳ್ಳೂರು ಬಳಿಯ ಕೆಎಲ್‌ಇ ಆಸ್ಪತ್ರೆಗೆ ಕಳುಹಿಸಿ ಕೊಡಲಾಗುತ್ತಿದೆ. ಬಿಮ್ಸ್ ನಲ್ಲಿ ಕೇವಲ ತುರ್ತು ಚಿಕಿತ್ಸೆಯನ್ನು ಮಾತ್ರ ಅವಕಾಶ ನೀಡಲಾಗುತ್ತಿದೆ.
ಇನ್ನು ಖಾಸಗಿ ಆಸ್ಪತ್ರೆಯಲ್ಲಿಯೂ ರೋಗಿಗಳ ದಾಖಲಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ರೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ತುರ್ತು ಚಿಕಿತ್ಸಾ ರೋಗಿಗಳ ಗಂಟಲು ದ್ರವದ ಮಾದರಿ ಪಡೆದು, ಚಿಕಿತ್ಸೆ ನೀಡಲಾಗುತ್ತಿದೆ.