Breaking News

ಶೃಂಗೇರಿ ಮರು ಮತ ಎಣಿಕೆ ಪ್ರಕರಣ – ರಾಜೇಗೌಡಗೆ ಸುಪ್ರೀಂನಲ್ಲಿ ತಾತ್ಕಾಲಿಕ ರಿಲೀಫ್

Spread the love

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಕೆರಳಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ  ಅಂಚೆ ಮತಗಳ ಮರು ಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ತಾತ್ಕಾಲಿಕ ರಿಲೀಫ್ ದೊರೆತಿದೆ.

ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು ಸೆಪ್ಟೆಂಬರ್ 10ಕ್ಕೆ ಮುಂದೂಡಿದ್ದು, ಅಲ್ಲಿಯವರೆಗೆ ಈ ಹಿಂದಿನ ಮಧ್ಯಂತರ ಆದೇಶವೇ ಮುಂದುವರಿಯಲಿದೆ. ಇದರಿಂದಾಗಿ ರಾಜೇಗೌಡ ಅವರ ಶಾಸಕ ಸ್ಥಾನ ಸದ್ಯಕ್ಕೆ ಸುಭದ್ರವಾಗಿದೆ.

ಇಂದು ನಡೆದ ವಿಚಾರಣೆ ವೇಳೆ, ಬಿಜೆಪಿ ಮುಖಂಡ ಡಿ.ಎನ್. ಜೀವರಾಜ್(DN Jeevaraj) ಅವರಿಗೆ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಲು ನ್ಯಾಯಾಲಯವು ಅವಕಾಶ ನೀಡಿದೆ. ಮುಂದಿನ ವಿಚಾರಣೆ ನಡೆಯುವವರೆಗೂ ಹೈಕೋರ್ಟ್ ಆದೇಶಕ್ಕೆ ನೀಡಲಾಗಿದ್ದ ತಡೆ ಮುಂದುವರಿಯಲಿದೆ.

ಏನಿದು ಪ್ರಕರಣ?
2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರು 201 ಮತಗಳ ಅಂತರದಿಂದ ಜಯಗಳಿಸಿದ್ದರು. ಅಂಚೆ ಮತಗಳ ಎಣಿಕೆಯಲ್ಲಿ ಲೋಪವಾಗಿದೆ ಎಂದು ಆರೋಪಿಸಿ ಬಿಜೆಪಿಯ ಡಿ.ಎನ್. ಜೀವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್ ಆದೇಶದಂತೆ ಮೇ 2ರಂದು ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಜೀವರಾಜ್ ಅವರು ಗೆಲುವು ಸಾಧಿಸಿ, ಶಾಸಕರಾಗಿ ಪ್ರಮಾಣವಚನ ಕೂಡ ಸ್ವೀಕರಿಸಿದ್ದರು.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಟಿ.ಡಿ. ರಾಜೇಗೌಡ ತಕ್ಷಣವೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ, ರಾಜೇಗೌಡ ಅವರೇ ಶಾಸಕರಾಗಿ ಮುಂದುವರಿಯಲು ಮಧ್ಯಂತರ ಆದೇಶ ನೀಡಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು 2023 ಹಾಗೂ 2026ರ ಮತ ಎಣಿಕೆಯ ಅಗತ್ಯ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಸೆಪ್ಟೆಂಬರ್ 10ರಂದು ನಡೆಯಲಿರುವ ಮುಂದಿನ ವಿಚಾರಣೆ ವೇಳೆ ದಾಖಲೆಗಳ ಪರಿಶೀಲನೆ ಹಾಗೂ ವಾದ-ಪ್ರತಿವಾದ ಮುಂದುವರಿಯಲಿದೆ.


Spread the love

About Laxminews 24x7

Check Also

ಡ್ಯೂಪ್ಲಿಕೇಟ್ ಕೀ ಬಳಸಿ ಐಷಾರಾಮಿ ಕಾರುಗಳ ಕಳ್ಳತನ – ಕರ್ನಾಟಕದಿಂದ ರಾಜಸ್ಥಾನವರೆಗೆ ‘ಕಾರ್‌ ಕಳ್ಳರ’ ಜಾಲ; ಇಬ್ಬರು ಅರೆಸ್ಟ್‌

Spread the loveಬೆಂಗಳೂರು: ಡ್ಯೂಪ್ಲಿಕೇಟ್ ಕೀ ಹಾಗೂ ಅತ್ಯಾಧುನಿಕ ಉಪಕರಣಗಳನ್ನ ಬಳಸಿ ದೇಶದ ವಿವಿಧೆಡೆ ಐಷಾರಾಮಿ ಕಾರುಗಳನ್ನು ಕಳ್ಳತನ ಮಾಡಿ, ರಾಜಸ್ಥಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ