Breaking News

ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಕೊಟ್ಟಿದ್ದ ವ್ಯಕ್ತಿ ಅರೆಸ್ಟ್

Spread the love

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಜಾ ಬಂಧಿಯಾಗಿರುವ ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಪೂರೈಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನ ಬಂಧಿಸಲಾಗಿದೆ.

ಬಾಣಸವಾಡಿ ನಿವಾಸಿ ನವೀನ್ ಎಂಬಾತನನ್ನ ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. 

ಅಪರಾಧ ಪ್ರಕರಣದಲ್ಲಿ ಈ ಹಿಂದೆ ಜೈಲು ಸೇರಿದ್ದ ನವೀನ್‌ಗೆ ಪ್ರತಾಪ್ ರಾಯ್ ಎಂಬಾತನ ಪರಿಚಯವಾಗಿತ್ತು. ಜೈಲಿನಿಂದ ಹೊರಬಂದ ಬಳಿಕ ನವೀನ್, ಪ್ರತಾಪ್ ರಾಯ್‌ಗೆ ಅಕ್ರಮವಾಗಿ ಮೊಬೈಲ್ ಫೋನ್ ತಲುಪಿಸಿದ್ದ. ಇದಕ್ಕಾಗಿ ಇಬ್ಬರ ನಡುವೆ ದೊಡ್ಡ ಮಟ್ಟದ ಹಣದ ವ್ಯವಹಾರವೂ ನಡೆದಿತ್ತು ಎಂದು ತಿಳಿಸಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ