Breaking News

ವಂದೇ ಮಾತರಂ, ಭಾರತ್ ಮಾತಾಕಿ ಜೈ ಎಂದ ವಿದ್ಯಾರ್ಥಿಗೆ ಬೆದರಿಕೆ – ಪ್ರಾಂಶುಪಾಲರ ವಿರುದ್ಧ FIR

Spread the love

ಬೀದರ್: ವಂದೇ ಮಾತರಂ ಹಾಗೂ ಭಾರತ್ ಮಾತಾಕಿ ಜೈ ಎಂದ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದಕ್ಕೆ ಪ್ರಾಂಶುಪಾಲರ ವಿರುದ್ಧ FIR ದಾಖಲಾಗಿದೆ.

ಬೀದರ್‌ ಜಿಲ್ಲೆಯ ಚಿಟಗುಪ್ಪ ಪಟ್ಟಣದಲ್ಲಿರುವ ಕಾಲೇಜೊಂದರಲ್ಲಿ ಈ ಘಟನೆ ನಡೆದಿದೆ. ಆ.15ರಂದು ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಘಟನೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಹಕೀಮ್ ಎಂಬುವವರ ವಿರುದ್ಧ ವಿದ್ಯಾರ್ಥಿಯ ತಂದೆ ಹಿರೋಬಾ ಗೌಳಿ ದೂರು ನೀಡಿದ್ದಾರೆ. ಈ ಕುರಿತು ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಸ್ವಾತಂತ್ರ್ಯೋತ್ಸವ ದಿನದಂದು ಧ್ವಜಾರೋಹಣ ಬಳಿಕ ಪಿಯುಸಿ ವಿದ್ಯಾರ್ಥಿ ಸಾಗರ್ ಗೌಳಿ ಎಂಬಾತನಿಂದ ವಂದೇ ಮಾತರಂ, ಭಾರತ್‌ ಮಾತಾಕಿ ಜೈ’ ಘೋಷಣೆ‌ ಕೂಗಿದ್ದ. ಈ ವೇಳೆ ಪ್ರಾಂಶುಪಾಲರು ಒಂದು ಧಾರ್ಮಿಕ ಸಮುದಾಯಕ್ಕೆ ಸೇರಿದ ಘೋಷಣೆ ಆಗಿದ್ದರಿಂದ ಇನ್ನೊಮ್ಮೆ ಕೂಗಬೇಡಿ, ಈ ತರಹ ನಮ್ಮ‌ ಕಾಲೇಜಿನಲ್ಲಿ ನಡೆಯುವುದಿಲ್ಲ ಎಂದು ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದಾರೆ.

ಕಾಲೇಜಿನಲ್ಲಿ ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳು ಒಟ್ಟೊಟ್ಟಿಗೆ ವಿದ್ಯಾಭ್ಯಾಸ ಮಾಡುತ್ತಿದ್ದು, ಪ್ರಾಂಶುಪಾಲರು ಹಿಂದೂ-ಮುಸ್ಲಿಂ ಅಂತ ತಾರತಮ್ಯ ಮಾಡುತ್ತಿದ್ದಾರೆ. ಈ ಮೂಲಕ ವಿವಿಧ ಸಮುದಾಯಗಳ ವಿದ್ಯಾರ್ಥಿಗಳಲ್ಲಿ ವೈಮನಸ್ಸು ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆ ಖಂಡಿಸಿ ಕಾಲೇಜು ಮುಂದೆ ಪ್ರತಿಭಟನೆ ನಡೆಸಿ ಪ್ರಾಂಶುಪಾಲರಿಗೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ತರಾಟೆ ತೆಗೆದುಕೊಂಡಿದ್ದಾರೆ


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ