Breaking News

ಹೊಲದಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಬಂಧಿಸಿದ ಬೆಳಗಾವಿ ಪೊಲೀಸರು

Spread the love

ಬೆಳಗಾವಿ: ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಣಚಿನಮರಡಿ ಗ್ರಾಮದ ನಡೆದಿದೆ.

ಅವನ್ನಾ ಸಿದ್ದಪ್ಪ ತಪಶಿ ಬಂಧಿತ ಆರೋಪಿ, ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯ ಪಿಎಸ್ಐ ಕೆ.ವಾಲಿಕರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಹೊಲದಲ್ಲಿ ಗಾಂಜಾ ಗಿಡಗಳನ್ನು ಬೆಳೆದಿರುವುದು ಪತ್ತೆಯಾಗಿದೆ.

ಆರೋಪಿತನಿಂದ ಸುಮಾರು 13 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಘಟನೆ ಕುರಿತು ಗೋಕಾಕ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ