Breaking News

ಕೇಂದ್ರದ ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

Spread the love

ಬೆಂಗಳೂರು: ಪಶ್ಚಿಮ ಘಟ್ಟಗಳ ರಕ್ಷಣೆಗೆ ಕೇಂದ್ರ ಸರ್ಕಾರದ ಕಸ್ತೂರಿ ರಂಗನ್ ವರದಿಯ ಏಳನೇ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ವಿಧಾನಸಭೆಯಲ್ಲಿ ಇಂದು ಕೇಂದ್ರದ ಏಳನೇ ಕರಡು ಅಧಿಸೂಚನೆ ವಿರೋಧಿಸಿ ನಡೆದ ಚರ್ಚೆಗೆ ಉತ್ತರ ಕೊಡುವಾಗ ಅರಣ್ಯ ಸಚಿವ ರಾಮಲಿಂಗಾರೆಡ್ಡಿ , ಕೇಂದ್ರದ ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲಾವಕಾಶ ಇದೆ. ರಾಜ್ಯ ಸರ್ಕಾರ ತನ್ನ ಆಕ್ಷೇಪಣೆಗಳನ್ನು ಸಲ್ಲಿಸುವ ಮೂಲಕ ಕೇಂದ್ರದ ಅಧಿಸೂಚನೆಯನ್ನು ತಿರಸ್ಕರಿಸಲಾಗುತ್ತದೆ ಅಂದ್ರು.

ಕೇಂದ್ರ ಸರ್ಕಾರ ಮತ್ತೆ ಅಧಿಸೂಚನೆ ಹೊರಡಿಸಿರೋದು ಆ ಭಾಗದ ಶಾಸಕರ ತೀವ್ರ ವಿರೋಧಕ್ಕೆ ಕಾರಣವಾಗಿದೆ.

ವಿಧಾನಸಭೆಯಲ್ಲಿಂದು ನಿಯಮ 69 ರಡಿ ಕೇಂದ್ರ ಹೊರಡಿಸಿದ ಏಳನೇ ಕರಡು ಅಧಿಸೂಚನೆ ವಿರೋಧಿಸಿ ಶಾಸಕರಾದ ಎ ಎಸ್ ಪೊನ್ನಣ್ಣ, ತಮ್ಮಯ್ಯ, ಟಿ ಡಿ ರಾಜೇಗೌಡ ಚರ್ಚೆ ಮಾಡಿದ್ರು. ಶಾಸಕರು ವರದಿ ಜಾರಿಯಾದರೆ ಏನೆಲ್ಲ ಪರಿಣಾಮ ಆಗಲಿದೆ ಎಂದು ಹಲವು ಆತಂಕಗಳನ್ನು ವ್ಯಕ್ತಪಡಿಸಿದರು. ಸರ್ಕಾರ ಅಧಿಸೂಚನೆ ತಿರಸ್ಕರಿಸಬೇಕೆಂದು ಒತ್ತಾಯಿಸಿದರು.


Spread the love

About Laxminews 24x7

Check Also

ಪ್ಯಾಕ್‌ ಮಾಡದ ಖಾದ್ಯ ತೈಲ ಮಾರಾಟಕ್ಕೆ ನಿಷೇಧ – ನಿಯಮ ಉಲ್ಲಂಘಿಸಿದ್ರೆ 7 ವರ್ಷ ಜೈಲು

Spread the loveಮುಂಬೈ: ಮಹಾರಾಷ್ಟ್ರದಲ್ಲಿ ಸಡಿಲ (ಪ್ಯಾಕ್ ಮಾಡದ) ಖಾದ್ಯ ತೈಲ ಮಾರಾಟ ಮಾಡುವುದನ್ನು ರಾಜ್ಯ ಆಹಾರ ಮತ್ತು ಔಷಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ