Breaking News

ಶ್ರೀರಂಗನಾಥ ದೇವಾಲಯಕ್ಕೆ 66 ಲಕ್ಷ ರೂ.ನ ಬಂಗಾರದ ಕಲಶ ಕೊಟ್ಟ ಉದ್ಯಮಿ

Spread the love

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀರಂಗನಾಥಸ್ವಾಮಿ ದೇವಾಲಯಕ್ಕೆ  ಟಿವಿಎಸ್‌ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ವೇಣು ಶ್ರೀನಿವಾಸನ್ 66.78 ಲಕ್ಷ ರೂಪಾಯಿ ಬೆಲೆಯ ಬಂಗಾರದ ಅಷ್ಟಲಕ್ಷ್ಮಿ ಕಲಶವನ್ನು ಕೊಡುಗೆಯಾಗಿ ನೀಡಿದ್ದಾರೆ.

ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಉಮಾ ಅವರಿಗೆ ಹಸ್ತಾಂತರಿಸಿದ ಕಲಶದಲ್ಲಿ  ಸುತ್ತಲೂ ಅಷ್ಟ ಲಕ್ಷ್ಮಿಯರ ಚಿತ್ರಗಳಿದ್ದು, 398.580 ಗ್ರಾಂ ತೂಕದ ಶುದ್ಧ ಬಂಗಾರದಿಂದ ಕೂಡಿದೆ.

ದೇವಾಲಯದ ರಾಯಗೋಪುರದಿಂದ ಕಲಶವನ್ನು ಮಂಗಳವಾದ್ಯ ಸಹಿತ ಗರ್ಭಗುಡಿವರೆಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಶ್ರೀರಂಗನಾಥಸ್ವಾಮಿ ದೇವರ ಸನ್ನಿಧಿಯಲ್ಲಿ ಇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಾಲಯದ ಪ್ರಧಾನ ಅರ್ಚಕ ವಿಜಯಸಾರಥಿ ನೇತೃತ್ವದಲ್ಲಿ ಪೂಜಾ ಕೈಂರ್ಯಗಳು ನಡೆದವು.

ಶ್ರೀರಂಗನಾಥಸ್ವಾಮಿ ದೇವಾಲಯಕ್ಕೆ 27 ವರ್ಷಗಳ ಹಿಂದೆ ಬರಲು ಪ್ರೇರಣೆಯಾಗಿತ್ತು. ಆದರೂ ಸಾಧ್ಯವಾಗಿರಲಿಲ್ಲ. ಕನಸಿನಲ್ಲಿ ಶ್ರೀರಂಗನಾಥಸ್ವಾಮಿ ಕಾಣಿಸಿಕೊಂಡ ಕಾರಣ ಈಗ ಬಂದಿದ್ದು ಸೇವೆ ಸಲ್ಲಿಸಿದ್ದೇನೆ ಎಂದು ವೇಣು ಶ್ರೀನಿವಾಸನ್ ಹೇಳಿದರು.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ