Breaking News

ಆಸ್ಟನ್ ಮಾರ್ಟಿನ್ ಕಾರು ಡಿಕ್ಕಿ, ಯುವತಿ ಸಾವು; ರಾಜ್ಯಸಭಾ ಎಂಪಿ ಪುತ್ರನ ವಿರುದ್ದ ಕೇಸ್‌ ದಾಖಲು

Spread the love

ಹೈದರಾಬಾದ್: ಐಷಾರಾಮಿ ಆಸ್ಟನ್ ಮಾರ್ಟಿನ್ ಕಾರು ಡಿಕ್ಕಿಯಾಗಿ 26 ವರ್ಷದ ಯುವತಿಯೊಬ್ಬರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ, ರಾಜ್ಯಸಭಾ ಸಂಸದ ಲಿಂಗಮನೇನಿ ರಮೇಶ್ ಅವರ ಪುತ್ರ ಲಿಂಗಮನೇನಿ ಸಂಜುಶ್ (21) ವಿರುದ್ಧ ಅತಿವೇಗ ಮತ್ತು ಅಜಾಗರೂಕ ಚಾಲನೆಯ ಆರೋಪದಡಿ ಪ್ರಕರಣ ದಾಖಲಾಗಿದೆ.

ಇನಾರ್ಬಿಟ್ ಮಾಲ್‌ನಲ್ಲಿರುವ ಲೈಫ್‌ಸ್ಟೈಲ್ ಬಟ್ಟೆ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಭಾರತಿ ಮುಖಿ, ಆಗಸ್ಟ್ 16ರ ಭಾನುವಾರ ಮಧ್ಯಾಹ್ನ ಸುಮಾರು 3 ಗಂಟೆಗೆ ತಮ್ಮ ಸಹೋದ್ಯೋಗಿ ಪೂಜಾ ಜೊತೆ ಊಟಕ್ಕೆ ತೆರಳಿದ್ದರು.

ಮಾಧಾಪುರ ವ್ಯಾಪ್ತಿಯ ಐಟಿಸಿ ಕೊಹಿನೂರ್ ಬಳಿ ಊಟ ಮುಗಿಸಿ ವಾಪಸ್ ಬರುತ್ತಿದ್ದಾಗ, ಮಾಲ್ ಮುಂಭಾಗ ರಸ್ತೆ ದಾಟುತ್ತಿದ್ದ ಭಾರತಿ ಅವರಿಗೆ ವೇಗವಾಗಿ ಬಂದ ಆಸ್ಟನ್ ಮಾರ್ಟಿನ್ ಕಾರು ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ತಲೆಗೆ ಗಂಭೀರ ಗಾಯಗಳಾಗಿ ತೀವ್ರ ರಕ್ತಸ್ರಾವಕ್ಕೊಳಗಾಗಿದ್ದ ಭಾರತಿಯನ್ನು ಅದೇ ಕಾರಿನಲ್ಲಿ ಜುಬಿಲಿ ಹಿಲ್ಸ್‌ನ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.


Spread the love

About Laxminews 24x7

Check Also

ವಿಜಯಪುರದಲ್ಲಿ ಮುಂದುವರಿದ ಕಾಂಗ್ರೆಸ್ ನಾಯಕರ ಮುನಿಸು – ಬರ ವೀಕ್ಷಣೆಗೆ ಬಾರದ ಶಾಸಕ ಯಶವಂತರಾಯ ಗೌಡ

Spread the loveವಿಜಯಪುರ: ಇತ್ತೀಚಿಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ವಿಜಯಪುರದ ಸಚಿವ ಎಂ.ಬಿ ಪಾಟೀಲ್ ಹಾಗೂ ಶಾಸಕ ಯಶವಂತರಾಯಗೌಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ