Breaking News

ತೃತೀಯಲಿಂಗಿಯಂತೆ ನಟಿಸಿ ಮನೆಗೆ ನುಗ್ಗಿ ಗಗನಸಖಿ ಮೇಲೆ ಅತ್ಯಾಚಾರ

Spread the love

ಮುಂಬೈ: ತೃತೀಯಲಿಂಗಿಯಂತೆ ನಟಿಸಿ ವ್ಯಕ್ತಿಯೊಬ್ಬ ಗಗನಸಖಿ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮುಂಬೈ ಮಧ್ಯ ಭಾಗದ ಪೊವೈನಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅನಿಲ್‌ ಶೇಷರಾವ್‌ ಶಿಂಧೆ ಬಂಧಿತ ಆರೋಪಿ. ಗಂಡನ ಅನಾರೋಗ್ಯ ಗುಣಪಡಿಸಲು ಕೆಟ್ಟ ದೃಷ್ಟಿ ತೆಗೆಯುವುದಾಗಿ ನಂಬಿಸಿ ಗಗನಸಖಿ ಮನೆಗೆ ಪ್ರವೇಶಿಸಿದ್ದ ಆರೋಪಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಸಂತ್ರಸ್ತೆ ಮನೆಗೆ ನುಗ್ಗಿದ ಆರೋಪಿ, ಏಕಾಏಕಿ ಬೆಡ್‌ರೂಮ್‌ಗೆ ಪ್ರವೇಶಿಸಿದ್ದಾನೆ. ನಂತರ ಮಹಿಳೆಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಪೊವೈ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಾಗಿದೆ.

ಕೃತ್ಯ ಎಸಗಿ ಆರೋಪಿ ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದರು. ಸೀರೆ ಧರಿಸಿದ್ದ ಆರೋಪಿಯು ಆಟೋರಿಕ್ಷಾದಲ್ಲಿ ಥಾಣೆಯ ಖರೇಗಾಂವ್‌ನ ಕೊಳೆಗೇರಿಯ ಕಡೆಗೆ ಹೋಗಿದ್ದನ್ನು ಪತ್ತೆಹಚ್ಚಿದರು. ನಂತರ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯು ತೃತೀಯಲಿಂಗಿಯಾಗಿ ಅಷ್ಟೇ ಅಲ್ಲ, ಭಿಕ್ಷುಕನಂತೆ ಕೂಡ ನಟಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಜನರು ಜಾಗರೂಕರಾಗಿರುವಂತೆ ಪೊಲೀಸರು ಎಚ್ಚರಿಸಿದ್ದಾರೆ. ಅಪರಿಚಿತ ವ್ಯಕ್ತಿಗಳು ತಮ್ಮ ಮನೆಗಳಿಗೆ ಪ್ರವೇಶಿಸಲು ಅವಕಾಶ ನೀಡಬೇಡಿ ಎಂದು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ