Breaking News

28 ಜೀವಾವಧಿ ಶಿಕ್ಷಾ ಬಂಧಿಗಳ ಅವಧಿ ಪೂರ್ವ ಬಿಡುಗಡೆಗೆ ಸಂಪುಟ ಅಸ್ತು

Spread the love

ಬೆಂಗಳೂರು: ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ  ಅನುಭವಿಸುತ್ತಿರುವ ಸನ್ನಡತೆ ಹೊಂದಿರುವ ಅರ್ಹ ಬಂಧಿಗಳ ಪೈಕಿ 28 ಮಂದಿಯನ್ನ ಅವಧಿಪೂರ್ವ ಬಿಡುಗಡೆ ಮಾಡಲು ಇಂದು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಒಟ್ಟು 45 ಪ್ರಕರಣಗಳ ಪೈಕಿ 28 ಜೀವಾವಧಿ ಶಿಕ್ಷಾ ಬಂಧಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿ ಪೂರ್ವ ಬಿಡುಗಡೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಇನ್ನೊಂದು ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯದ ಸಹಮತಿ ಪಡೆದು ಅವಧಿಪೂರ್ವ ಬಿಡುಗಡೆ ಮಾಡಲು ಅನುಮೋದಿಸಲಾಗಿದೆ.

ಒಟ್ಟು 29 ಜೀವಾವಧಿ ಶಿಕ್ಷಾ ಬಂಧಿಗಳು ಅವಧಿಪೂರ್ವ ಬಿಡುಗಡೆಗೆ ಅರ್ಹರಾಗಿದ್ದು, ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿರುವ ಜೀವಾವಧಿ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆಗೆ ಸಂಬಂಧಿಸಿದಂತೆ ಒಟ್ಟು 45 ಪ್ರಕರಣಗಳನ್ನು ಪರಿಶೀಲಿಸಲಾಗಿತ್ತು.

ಸರ್ಕಾರದ ಮಾರ್ಗಸೂಚಿಗಳು, ಬಂಧಿಗಳ ಸನ್ನಡತೆ, ಜೈಲು ವಾಸದ ಅವಧಿ ಸೇರಿದಂತೆ ನಿಗದಿತ ಮಾನದಂಡಗಳ ಆಧಾರದ ಮೇಲೆ ಪ್ರಕರಣಗಳನ್ನು ಪರಿಶೀಲಿಸಲಾಗಿದೆ.


Spread the love

About Laxminews 24x7

Check Also

ನಾಗೇಂದ್ರ ರಾಜೀನಾಮೆ ಬಗ್ಗೆ ನೋಟಿಸ್‌ ‌ಕೊಟ್ಟು ವಿಪಕ್ಷ ಚರ್ಚೆ ಮಾಡಲಿ: ಡಿಕೆಶಿ

Spread the loveಬೆಂಗಳೂರು: ವಿಧಾನ ಪರಿಷತ್ ಕಲಾಪ 5ನೇ ದಿನವೂ ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಕಲಾಪ ಬಲಿಯಾಯ್ತು. ವಿಪಕ್ಷಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ