ಬಳ್ಳಾರಿ: ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆಯಾಗಿರುವ ಘಟನೆ ವಿಜಯನಗರ (Vijayanagara) ಜಿಲ್ಲೆ ಹೊಸಪೇಟೆ (Hospet) ತಾಲೂಕಿನ ಹಂಪಿಯಲ್ಲಿ ನಡೆದಿದೆ.
ಯಾಸ್ಮೀನ್(13) ಹಾಗೂ ಶಾಹೀನ್(38) ಹಂಪಿ ಬಳಿಯ ತುಂಗಭದ್ರಾ ನದಿಯಲ್ಲಿ ನಾಪತ್ತೆಯಾಗಿರುವ ತಾಯಿ, ಮಗಳು. ಆಂಧ್ರ ಪ್ರದ್ರೇಶದ ಕರ್ನೂಲು ಜಿಲ್ಲೆಯ ಸೂಳೆಕೆರೆ ಗ್ರಾಮದಿಂದ ಸಂಬಂಧಿಕರೊಂದಿಗೆ ತಾಯಿ, ಮಗಳು ಪ್ರವಾಸಕ್ಕೆ ಬಂದಿದ್ದರು. ಅಡುಗೆ ಮಾಡಿ ತುಂಗಭದ್ರಾ ನದಿಯ ಸ್ನಾನಘಟ್ಟದಲ್ಲಿ ಸ್ನಾನಕ್ಕೆ ತೆರಳಿದ್ಧ ವೇಳೆ ದುರ್ಘಘಟನೆ ಸಂಭವಿಸಿದೆ.
ಕಾಲುಜಾರಿ ನದಿಯಲ್ಲಿ ಬಿದ್ದು ಕಣ್ಮರೆಯಾಗಿರುವ ತಾಯಿ, ಮಗಳಿಗಾಗಿ ಹಂಪಿ ಪ್ರವಾಸಿ ಪೊಲೀಸ್ ಠಾಣೆಯ ಪೊಲೀಸರಿಂದ ಶೋಧಕಾರ್ಯ ಮುಂದುವರೆದಿದ್ದು, ಹಂಪಿ ಪ್ರವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7