Breaking News

ಬರಗಾಲದ ಎಫೆಕ್ಟ್ – ಗಗನಕ್ಕೇರಿದ ‘ಸಕ್ಕರೆ ನಾಡಿನ’ ಬೆಲ್ಲದ ಬೆಲೆ

Spread the love

ಮಂಡ್ಯ: ಮಂಡ್ಯದ ಕಂಪು ಖ್ಯಾತಿಯ ಅಚ್ಚ ಬೆಲ್ಲ ಈಗ ಅಕ್ಷರಶಃ ಬಂಗಾರವಾಗಿದೆ. ರಾಜ್ಯದಲ್ಲಿ ತಾಂಡವವಾಡುತ್ತಿರುವ ಬರಗಾಲದ ಛಾಯೆ ಕಾವೇರಿ ನಾಡಿನ ರೈತರನ್ನು ಹೈರಾಣಾಗಿಸಿದ್ದು, ಇದರ ನೇರ ಬಿಸಿ ಈಗ ಮಾರುಕಟ್ಟೆಯಲ್ಲಿ ಬೆಲ್ಲದ ಬೆಲೆ ಮೇಲೆ ತಟ್ಟಿದೆ. ಇತಿಹಾಸದಲ್ಲೇ ಎಂದೂ ಕಾಣದ ರೀತಿಯಲ್ಲಿ ಮಂಡ್ಯದ ಬೆಲ್ಲದ ದರ ದಾಖಲೆಯ ಏರಿಕೆ ಕಂಡಿದೆ.

ಬೆಲೆ ಜಿಗಿತ:
ಈ ಹಿಂದೆ ಕ್ವಿಂಟಾಲ್‌ಗೆ 4,500 ರೂ. ಇದ್ದ ಬೆಲ್ಲದ ದರ, ಕಳೆದ ಎರಡಮೂರು ದಿನಗಳಲ್ಲಿ ಬರೋಬ್ಬರಿ 2,000 ರೂ. ಏರಿಕೆಯಾಗಿ ಈಗ 6,500 ರೂ.ನಿಂದ 7,000 ರೂ.ವರೆಗೆ ಹರಾಜಾಗುತ್ತಿದೆ.

ನೀರಿನ ಕೊರತೆ:
ಕಳೆದ ಆರು ತಿಂಗಳಿಂದ ಮಳೆಯಿಲ್ಲದೆ ಹಾಗೂ ಕಬ್ಬಿಗೆ ನೀರಿನ ಪೂರೈಕೆಯಾಗದೆ ಗದ್ದೆಗಳು ಒಣಗಿ ನಿಂತಿವೆ. ಪರಿಣಾಮವಾಗಿ ಕಬ್ಬಿನ ಇಳುವರಿ ಅರ್ಧದಷ್ಟು ಕುಸಿದಿದೆ. ಗಾಣಗಳಿಗೆ ಕಬ್ಬು ಸಿಗದೆ ಉತ್ಪಾದನೆ ಸಂಪೂರ್ಣ ಕುಂಠಿತಗೊಂಡಿದೆ. ಹಿಂದೆ ಪ್ರತಿದಿನ 10 ರಿಂದ 12 ಲಾರಿಗಳಷ್ಟು ಮಾರುಕಟ್ಟೆಗೆ ಹೋಗುತ್ತಿದ್ದ ಬೆಲ್ಲದ ಪೂರೈಕೆ, ಈಗ ಅರ್ಧದಷ್ಟು ಇಳಿಕೆಯಾಗಿದೆ.

ವ್ಯಾಪಾರಸ್ಥರ ಆಶ್ಚರ್ಯ:
ಬೆಲ್ಲದ ಮಾರುಕಟ್ಟೆ ಪ್ರಾರಂಭವಾದ ದಿನದಿಂದಲೂ ಈ ಮಟ್ಟಿಗೆ ದರ ಏರಿಕೆಯಾಗಿರಲಿಲ್ಲ. ಈ ಸೀಸನ್‌ನಲ್ಲಿ ಬೆಲೆ ತಗ್ಗಬೇಕಿತ್ತಾದರೂ, ಭಾರೀ ಏರಿಕೆ ಕಂಡಿರುವುದು ಇದೇ ಮೊದಲು ಎಂದು ವ್ಯಾಪಾರಸ್ಥರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಮಳೆಯಾಶ್ರಿತ ಹಾಗೂ ನೀರಾವರಿಯಿಲ್ಲದೆ ಒಣಗಿದ ಕಬ್ಬಿನ ಬೆಳೆ ರೈತರಿಗೆ ನಷ್ಟವನ್ನುಂಟು ಮಾಡಿದ್ದರೆ, ಕಚ್ಚಾ ವಸ್ತು ಸಿಗದೆ ಬೆಲ್ಲದ ದರ ಗಗನಕ್ಕೇರಿರುವುದು ಸಾಮಾನ್ಯ ಜನರಿಗೂ ಬಿಸಿ ತಟ್ಟುವಂತೆ ಮಾಡಿದೆ.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ