Breaking News

105 ವರ್ಷದ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿದ ಸುಪ್ರೀಂ

Spread the love

ನವದೆಹಲಿ: 1988ರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 105 ವರ್ಷದ ರಸಿಕ್ ಚಂದ್ರ ಮಂಡಲ್  ಅವರಿಗೆ ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿ ಮಹತ್ವದ ಆದೇಶ ಹೊರಡಿಸಿದೆ. ವೃದ್ಧಾಪ್ಯ ಹಾಗೂ ಆರೋಗ್ಯ ಸಮಸ್ಯೆಗಳನ್ನು ಪರಿಗಣಿಸಿದ ನ್ಯಾಯಾಲಯ, ಉಳಿದಿರುವ ಜೀವಾವಧಿ ಶಿಕ್ಷೆಯನ್ನು ಮನ್ನಾ ಮಾಡಿ ಅವರನ್ನು ಮತ್ತೆ ಜೈಲಿಗೆ ಕಳುಹಿಸದಂತೆ ಆದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಹಾಗೂ ವಿ. ಮೊಹನಾ ಅವರಿದ್ದ ಪೀಠವು ಪ್ರಕರಣವನ್ನು ಮುಕ್ತಾಯಗೊಳಿಸಿ, 2024ರಲ್ಲಿ ನೀಡಿದ್ದ ಮಧ್ಯಂತರ ಜಾಮೀನು ಆದೇಶವನ್ನು ಅಂತಿಮಗೊಳಿಸಿತು. ಜೀವಾವಧಿ ಶಿಕ್ಷೆ ಪೂರ್ಣಗೊಂಡಿಲ್ಲದಿದ್ದರೂ ಅವರನ್ನು ಮತ್ತೆ ಬಂಧನಕ್ಕೆ ತೆಗೆದುಕೊಳ್ಳಲಾಗುವುದಿಲ್ಲ ಎಂದು ಪೀಠ ಸ್ಪಷ್ಟಪಡಿಸಿತು.

1988ರಲ್ಲಿ ನಡೆದಿತ್ತು ಕೊಲೆ:
ಪಶ್ಚಿಮ ಬಂಗಾಳದ ಮಾಲ್ದಾ ಜಿಲ್ಲೆಯ ನಿವಾಸಿ ರಸಿಕ್ ಚಂದ್ರ ಮಂಡಲ್ ಅವರು 1920ರಲ್ಲಿ ಜನಿಸಿದ್ದರು. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಮ್ಮ ಸಹೋದರ ಸುರೇಶ್ ಮಂಡಲ್ ಅವರ ಹತ್ಯೆ ಮಾಡಿದ ಆರೋಪ ಅವರ ಮೇಲಿತ್ತು. 1994ರಲ್ಲಿ ವಿಚಾರಣಾ ನ್ಯಾಯಾಲಯ ಅವರನ್ನು ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಮಂಡಲ್ ಅವರು ಸುಮಾರು 32 ವರ್ಷಗಳ ಕಾಲ ಜೈಲಿನಲ್ಲಿ ಕಳೆದಿದ್ದರು. 2018ರಲ್ಲಿ ಕಲ್ಕತ್ತಾ ಹೈಕೋರ್ಟ್ ಅವರ ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿತ್ತು. ಬಳಿಕ ಅವರು ಸುಪ್ರೀಂ ಕೋರ್ಟ್ ಮೊರೆಹೋದರೂ ಅಲ್ಲಿ ಕೂಡ ಮನವಿ ತಿರಸ್ಕೃತವಾಗಿತ್ತು.

99ರ ವಯಸ್ಸಿನಲ್ಲಿ ಬಿಡುಗಡೆ ಮನವಿ:
2020ರಲ್ಲಿ 99 ವರ್ಷದವರಾಗಿದ್ದ ಮಂಡಲ್ ಅವರು ವಯಸ್ಸು ಹಾಗೂ ವಯೋಸಹಜ ಕಾಯಿಲೆಗಳನ್ನು ಉಲ್ಲೇಖಿಸಿ ಅವಧಿಪೂರ್ವ ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. 2024ರ ನವೆಂಬರ್ 29ರಂದು ಸುಪ್ರೀಂ ಕೋರ್ಟ್ ಅವರಿಗೆ ಮಧ್ಯಂತರ ಜಾಮೀನು/ಪೆರೋಲ್ ನೀಡಿತ್ತು. ಇದೀಗ ಆ ಆದೇಶವನ್ನು ಅಂತಿಮಗೊಳಿಸುವ ಮೂಲಕ ಉಳಿದ ಶಿಕ್ಷೆಯಿಂದಲೂ ಅವರಿಗೆ ಮುಕ್ತಿ ನೀಡಲಾಗಿದೆ.


Spread the love

About Laxminews 24x7

Check Also

ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ – ಪ್ರಮುಖ ಆರೋಪಿ ನ್ಯಾಯಾಂಗ ಬಂಧನಕ್ಕೆ, ನಾಲ್ವರು ಪೇದೆ ಅಮಾನತು

Spread the loveರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ನಡೆದಿದ್ದ ಯುವತಿ ಅತ್ಯಾಚಾರ & ಕೊಲೆ ಪ್ರಕರಣದ ಪ್ರಮುಖ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ