Breaking News

ದರ್ಶನ್‌ಗೆ ಮಾಫಿ ಸಾಕ್ಷಿ ಸಂಕಷ್ಟ – ದೈವದ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ

Spread the love

ಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ವಿರುದ್ಧ ಮಾಫಿ ಸಾಕ್ಷಿ ವಿಚಾರ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ದರ್ಶನ್ ಪತ್ನಿ ವಿಜಯಲಕ್ಷ್ಮಿ  ದೈವದ ಮೊರೆ ಹೋಗಿದ್ದಾರೆ.

ಮಂಗಳೂರಿನ  ಶ್ರೀಕ್ಷೇತ್ರ ಮಂದಾರಬೈಲು ಶ್ರೀರಕ್ತೇಶ್ವರಿ ಮಂತ್ರದೇವತಾ ಹಾಗೂ ಗುಳಿಗ ದೈವದ ಸನ್ನಿಧಿಯಲ್ಲಿ ವಿಜಯಲಕ್ಷ್ಮಿ ವಿಶೇಷ ಸೇವೆ ಸಲ್ಲಿಸಿದ್ದಾರೆ. ಕೋಲ ಸೇವೆ ನಡೆಸಿ, ವಿಶೇಷ ಪೂಜೆ ಹಾಗೂ ಹರಕೆ ಸಲ್ಲಿಸಿದ್ದಾರೆ.

ದರ್ಶನ್‌ಗೆ  ಪ್ರದೋಷ್‌ ಮಾಫಿ ಸಾಕ್ಷಿ ಕಂಟಕವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ದೈವದ ಸನ್ನಿಧಿಯಲ್ಲಿ ಸೇವೆ ಮಾಡಿಸಿದ್ದಾರೆ. ಪ್ರಕರಣದ ಸಂಕಷ್ಟದಿಂದ ಪಾರಾಗಲು ದೈವದ ಮೊರೆ ಹೋಗಿರುವ ವಿಜಯಲಕ್ಷ್ಮಿ, ವಿಶೇಷ ಪೂಜೆ ಹಾಗೂ ಹರಕೆ ಮೂಲಕ ದೈವಾನುಗ್ರಹ ಕೋರಿದ್ದಾರೆ.

ಆ.24ಕ್ಕೆ ವಿಚಾರಣೆ ಮುಂದೂಡಿಕೆ
ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಆದೇಶವನ್ನ 59ನೇ ಸೆಷನ್ಸ್ ಕೋರ್ಟ್ ಆ.24ಕ್ಕೆ ಮುಂದೂಡಿದೆ.

ಪ್ರದೋಷ್ ಅಪರಾಧಿಕ ಹಿನ್ನಲೆ ಬಗ್ಗೆ ಕೋರ್ಟ್‌ಗೆ ಕಾಮಾಕ್ಷಿಪಾಳ್ಯ ಪೊಲೀಸರು ವರದಿ ಸಲ್ಲಿಸಿದ್ದರು. ಪ್ರದೋಷ್ ಮೇಲೆ ಈ ಕೇಸ್ ಬಿಟ್ಟು ಬೇರೆ ಯಾವ ಕೇಸ್ ಇಲ್ಲ ಎಂದು ಎಸಿಪಿ ವರದಿ ಸಲ್ಲಿಸಿದ್ದರು. ಜೈಲಿನಲ್ಲಿರುವ ವೇಳೆ ಪ್ರದೋಷ್ ನಡವಳಿಕೆಯ ಬಗ್ಗೆ ವರದಿ ನೀಡುವಂತೆಯೂ ಕೋರ್ಟ್ ಕೇಳಿತ್ತು.


Spread the love

About Laxminews 24x7

Check Also

2027ರ ಜನವರಿ ಅಂತ್ಯಕ್ಕೆ ವಿಮಾನಯಾನ – ಕೊನೆ ಹಂತದತ್ತ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ

Spread the loveವಿಜಯಪುರ: ಬಹುನಿರೀಕ್ಷಿತ ವಿಜಯಪುರ ವಿಮಾನ ನಿಲ್ದಾಣ ಕಾರ್ಯಾರಂಭಕ್ಕೆ ಮುಹೂರ್ತ ಕೂಡಿ ಬಂದಿದ್ದು, 2027ರ ವರ್ಷಾರಂಭವಾಗುತ್ತಿದ್ದಂತೆಯೇ ವಿಮಾನ ಹಾರಿಸುವ ಪ್ರಯತ್ನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ