Breaking News

ಆಟವಾಡುತ್ತಾ ಕೀ ಆನ್‌ ಮಾಡಿದ ಮಗು – ಟ್ರ್ಯಾಕ್ಟರ್‌ ಮೈಮೇಲೆ ಹರಿದು ತಂದೆ ದಾರುಣ ಸಾವು

Spread the love

ಹಾಸನ: ಮೂರು ವರ್ಷದ ಮಗು ಆಟವಾಡುತ್ತಾ ಟ್ರ್ಯಾಕ್ಟರ್‌  ಕೀ ಆನ್‌ ಮಾಡಿದ ಪರಿಣಾಮ ತಂದೆಯ ಮೇಲೆ ಚಕ್ರ ಹರಿದು ದಾರುಣವಾಗಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ  ಪಟ್ಟಣದ ಕೋಟೆ ಒಕ್ಕಲಿಗರ ಬೀದಿಯಲ್ಲಿ ನಡೆದಿದೆ.

ಯಶ್ವಂತ್ (37) ಟ್ರಾಕ್ಟರ್ ಹರಿದು ಸಾವನ್ನಪ್ಪಿದ ವ್ಯಕ್ತಿ. ಸಾರಿಗೆ ಸಂಸ್ಥೆಯ ನೌಕರರಾಗಿದ್ದ ಅವರು, ಅರಕಲಗೂಡು ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಹೊಸ ಮನೆ ಕಟ್ಟಿಸುತ್ತಿದ್ದ ಯಶ್ವಂತ್‌, ವರಮಹಾಲಕ್ಷ್ಮೀ ಹಬ್ಬದ ದಿನದಂದು ಆರ್‌ಸಿಸಿಗಾಗಿ ಟ್ರಾಕ್ಟರ್‌ನಲ್ಲಿ ಸೆಂಟ್ರಿಂಗ್ ಸಾಮಾಗ್ರಿಗಳನ್ನು ತರಿಸಿದ್ದರು. ಈ ವೇಳೆ ಮಗುವನ್ನು ಆಟವಾಡಿಸುತ್ತಾ ಟ್ರ್ಯಾಕ್ಟರ್‌ ಮೇಲೆ ಕೂರಿಸಿದ್ದರು. ಮಗು ಆಟವಾಡುತ್ತ ಟ್ರ್ಯಾಕ್ಟರ್‌ ಕೀ ಆನ್‌ ಮಾಡಿದ್ದು, ಟ್ರ್ಯಾಕ್ಟರ್‌ ಏಕಾಏಕಿ ಮುಂದಕ್ಕೆ ಚಲಿಸಿದೆ.

ಮಗು ಕೆಳಗೆ ಬೀಳುತ್ತದೆ ಎಂದು ಗಾಬರಿಯಲ್ಲಿ, ರಕ್ಷಣೆಗೆ ಬಂದ ಯಶ್ವಂತ್‌ ಮೇಲೆ ಟ್ರ್ಯಾಕ್ಟರ್‌ ಚಕ್ರ ಹರಿದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ